ವಿಜಯಪುರ

2025-26ನೇ ಸಾಲಿನ ಶೈಕ್ಷಣಿಕ ಪಾರಿತೋಷಕ ವಿತರಣಾ ಸಮಾರಂಭ

2025-26ನೇ ಸಾಲಿನ ಶೈಕ್ಷಣಿಕ ಪಾರಿತೋಷಕ ವಿತರಣಾ ಸಮಾರಂಭ

ಲೋಕದರ್ಶನ ವರದಿ 

ವಿಜಯಪುರ, ಜು.27: ನಗರದ ವಿ.ಬಿ. ದರ್ಬಾರ್ ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಪಾರಿತೋಷಕ ವಿತರಣಾ ಸಮಾರಂಭವನ್ನು ಜುಲೈ 25ರಂದು ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಯಿತು.  

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಖಜಾನೆ ಉಪನಿರ್ದೇಶಕ ಆನಂದ ವಿ. ಮುಚ್ಚಂಡಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಕ್ರಮಬದ್ಧತೆ ಹಾಗೂ ನಿರಂತರ ಪರಿಶ್ರಮದಿಂದ ತಮ್ಮ ಗುರಿ ಸಾಧಿಸಬಹುದೆಂದು ತಿಳಿಸಿದರು. ಸಾಧನೆಗೆ ಆತ್ಮವಿಶ್ವಾಸ ಮತ್ತು ಶ್ರಮವೇ ಮುಖ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಾರ್ಥ ಎನ್‌. ದರ್ಬಾರ್, ವಿದ್ಯಾರ್ಥಿವರ್ಧಕ ಸಂಘದ ಪದಾಧಿಕಾರಿಗಳು ಹಾಗೂ ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಶಸ್ತಿ ಪಡೆಯುವುದು ಅಂತಿಮ ಗುರಿಯಲ್ಲ; ಅದು ಇನ್ನಷ್ಟು ಜವಾಬ್ದಾರಿ ಮತ್ತು ಉನ್ನತ ಸಾಧನೆಗೆ ಪ್ರೇರಣೆಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.  

ಶಾಲೆಯ ಉಪಪ್ರಾಚಾರ್ಯ ವಿ.ಕೆ. ಗುಜರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ಸಮಾರಂಭದಲ್ಲಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು, ಪೋಷಕರು, ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. 


ಸುದ್ದಿ ಓದಿ