ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಮುಖ್ಯ ಗುರುಗಳ ಶೈಕ್ಷಣಿಕ ಪ್ರಗತಿ ಸಭೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಮುಖ್ಯ ಗುರುಗಳ ಶೈಕ್ಷಣಿಕ ಪ್ರಗತಿ ಸಭೆ

ಹೂವಿನ ಹಡಗಲಿ 29 : ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿವಿದ್ಯಾರ್ಥಿಗಳ ನೋಂದಣಿ ಕಾರ್ಯ ಪೂರ್ಣಗೊಳಿಸಿರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ  ಹೇಳಿದರು.ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಗುರುವಾರ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಮುಖ್ಯ ಗುರುಗಳ ಶೈಕ್ಷಣಿಕ ಪ್ರಗತಿ ಸಭೆಯಲ್ಲಿ ಅವರು ಮಾತನಾಡಿದರು.

ಡಿಸೆಂಬರ್ ಅಂತ್ಯಕ್ಕೆ ಎಸ್ಸೆಸ್ಸೆಲ್ಸಿ ಪಠ್ಯಕ್ರಮ ಪೂರ್ತಿಗೊಳಿಸಿ ಜನವರಿಯಿಂದ ಪಾಠಗಳನ್ನು ಪುನರಾವರ್ತನೆ ಮಾಡಬೇಕು ಎಂದರು.ಪ್ರತಿ ಭಾನುವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ವೇಳಾಪಟ್ಟಿ ರಚಿಸಿಕೊಂಡು ಸರದಿ ಪ್ರಕಾರ ನಿರ್ವಹಿಸಿರಿ ಎಂದು ಹೇಳಿದರು.ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಯೋಜನೆ ರೂಪಿಸಿ ಅದನ್ನು ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರಂತರವಾಗಿ ಮಾಡಬೇಕು. ಸತತ ಗೈರು ಹಾಜರಾಗುವ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಹೋಗಿ ತಂದೆ ತಾಯಿ ಪೋಷಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಾಗಿದೆ ಎಂದರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ಎ ಪಿ ಎಫ್ ಮೊಟ್ಟೆ ವಿತರಣೆ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಹೇಳಿದರು.ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ, ತಾಲೂಕು ದೈಹಿಕ ಅಧೀಕ್ಷಕರಾದ ರಫಿ ಅಹಮದ್ ಖವಾಸ್ ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್, ಉಪ ಪ್ರಾಂಶುಪಾಲ ರವೀಂದ್ರನಾಥ ಉಪಸ್ಥಿತರಿದ್ದರು. ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್ ಮಲ್ಲಿಕಾರ್ಜುನ ನಿರ್ವಹಿಸಿದರು.ಸರ್ಕಾರಿ ಅನುದಾನಿತ ಅನುದಾನರಹಿತ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಗಳ ಮುಖ್ಯ ಗುರುಗಳು ಶೈಕ್ಷಣಿಕ ಸಭೆಯಲ್ಲಿ ಭಾಗವಹಿಸಿದ್ದರು. 


ಸುದ್ದಿ ಓದಿ