ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕ ಬೆಂಕಿ : ಚಾಲಕನ ಚಾಣಾಕ್ಷತನದಿಂದ ಬಚಾವಾದ ಪ್ರಯಾಣಿಕರು
ಬೆಳಗಾವಿ : ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬಸ್ಸು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ಬಸ್ ಚಾಲಕನ ಚಾಣಾಕ್ಷತನದಿಂದ ಎಲ್ಲ ಪ್ರಯಾಣಿಕರು ಬಚಾವಾದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ನರಸಿಂಗಪೂರ ಬಳಿ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
ನಿಪ್ಪಾಣಿಯಿಂದ ಬೆಳಗಾವಿಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದು, ನಿಪ್ಪಾಣಿ ಘಟಕದ ಸಾರಿಗೆ ಸಂಸ್ಥೆಯ ಬಸ್ಸು ಹುಕ್ಕೇರಿ ತಾಲೂಕಿನ ನರಸಿಂಗಪೂರ ಬಳಿ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚರಿಸುತ್ತಿದ್ದಾಗ ಬಸ್ಸಿನ ಇಂಜಿನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಇದರದ ಎಚ್ಚೆತ್ತ ಬಸ್ಸಿನ ಚಾಲಕ ಬಸ್ಸಿನ ವೇಗ ಕಡಿಮೆ ಮಾಡಿ ರಸ್ತೆ ಪಕ್ಕ ನಿಲ್ಲಿಸಿ ಬಸ್ಸಿನಲ್ಲಿ ಇದ್ದ ಎಲ್ಲ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗೆ ಇಳಿಸಿದ್ದಾನೆ.
ಇದರಿಂದ ಬಚಾವಾದ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿದು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ಬಳಿಕ ಬಸ್ಸಿಗೆ ಸಂಪೂರ್ಣವಾಗಿ ಬೆಂಕಿ ಆವರಿಸಿಕೊಂಡು ಬಸ್ಸು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಬಳಿಕ ಸುದ್ಸಿ ತಿಳಿದ ಯಮಕನಮರಡಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಷ್ಟರಲ್ಲಿ ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿಸದೆ.
ಸದ್ಯ ದೀಪಾವಳಿ ಹಬ್ಬ ಮುಗಿದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ವಿರುವದರಿಂದ ಬಸ್ಸುಗಳಿಗೆ ಬಿಡುವಿಲ್ಲದೆ ಓಡಿಸುತ್ತಿರುವದರಿಂದ ಬಸ್ಸಿನ ಇಂಜಿನ್ ಗಳಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಿವೆ ಎನ್ನಲಾಗಿದೆ.