ಬೆಳಗಾವಿಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ; ಕಾರಿನಿಂದ ಹೋರ ಓಡಿ ಬಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಳಗಾವಿಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ; ಕಾರಿನಿಂದ ಹೋರ ಓಡಿ ಬಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಳಗಾವಿ : ಸಂಚರಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. 


    ನಗರದ ಕೃಷ್ಣ ದೇವರಾಯ ( ಕೊಲ್ಲಾಪುರ) ವೃತ್ತದಲ್ಲಿ ಈ ಘಟನೆ ನಡೆದಿದ್ದು, ಇದರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಕೊಲ್ಲಾಪುರ ವೃತ್ತದ ಸಂಚಾರಿ ಸಿಗ್ನಲ್ ನಲ್ಲಿ ಸೋಮವಾರ ರಾತ್ರಿ ಸುಮಾರು 7.45 ಗಂಟೆಗೆ ಗೋವಾ ರಾಜ್ಯದ ನೋಂದಣಿ ಹೊಂದಿರುವ ಕಾರಿನ ಬಾನೇಟ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು‌ ಕಾರಿನಿಂದ ಹೋರ ಓಡಿ ಬಂದಿದ್ದಾರೆ.

    ಈ ಹಿನ್ನೆಲೆಯಲ್ಲಿ ಯಾವದೇ ಸಾವು ನೋವು ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನೊಂದಿಸುವಷ್ಟರಲ್ಲಿ ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಅಲ್ಲದೆ ಮತ್ತೆ ಬೇರೆ ಅನಾಹುತ ನಡೆಯದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳದಲ್ಲಿ ಇದ್ದ ಪೊಲೀಸರು ನಿಗಾ ವಹಿಸಿದ್ದರು.  

ಸುದ್ದಿ ಓದಿ