ಚಿನ್ನಾಭರಣಗಳ ಕಳ್ಳತನ ಕಳುವು ಪ್ರಕರಣ ಆರೋಪಿಗಳ ಬಂಧನ
Accused arrested in jewellery theft case
ಸಿರುಗುಪ್ಪ 23: ಸಿರಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಚೆಗೆ ನಡೆದ ದೇವಸ್ಥಾನದ ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ತಾಲೂಕಿನ ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಾಪುರ ಗ್ರಾಮದ ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಸಿರಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕರೂರು ಗ್ರಾಮದ ಸುಂಕಲಮ್ಮ ದೇವಸ್ಥಾನದಲ್ಲಿ ದೇವರ ವಿಗ್ರಹಗಳ ಮೇಲಿನ ಚಿನ್ನಾಭರಣಗಳ ಕಳ್ಳತನ ನಡೆದಿತ್ತು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿತರಾದ ಚಾನಾಳ್ ಗ್ರಾಮದ ನಿವಾಸಿಗಳಾದ ಮಹಾಲಿಂಗ (48) ಹಾಗೂ ವೆಂಕಟೇಶ್ ಉರುಫ್ ಹಡ್ಲಿಗಿ ವೆಂಕಟೇಶ್ (47), ಇವರನ್ನು ಬಂಧಿಸಿ ಆರೋಪಿತರಿಂದ ರೂ.1.25 ಲಕ್ಷ ಬೆಲೆ ಬಾಳುವ ಬಂಗಾರ ಮತ್ತು ಬೆಳ್ಳಿ ಆಭರಣ ಪ್ರಕರಣದಲ್ಲಿ ಕೃತ್ಯಕ್ಕೆ ಬಳಸಿದ ರೂ.50 ಸಾವಿರ ಬೆಲೆ ಬಾಳುವ ದ್ವಿಚಕ್ರ ವಾಹನ ಜಪ್ತು ಮಾಡಿಕೊಂಡಿರುತ್ತಾರೆ.
ಮೈಲಾಪುರ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕಳುವಾದ ರೂ.98 ಸಾವಿರ ಮೌಲ್ಯದ ಬೆಳ್ಳಿ ಮತ್ತು ಬಂಗಾರದ ಆಭರಣಗಳನ್ನು ಆರೋಪಿತರಿಂದ ಪಡೆದಿದ್ದು, ನಗದು ಸೇರಿದಂತೆ ಒಟ್ಟು ರೂ. 2.83 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣವನ್ನು ಬಳ್ಳಾರಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್, ಬಳ್ಳಾರಿ ಹಾಗೂ ಸಿರುಗುಪ್ಪ ಪೊಲೀಸ್ ಉಪಾಧೀಕ್ಷಕ ಮಾಲತೇಶ ಕೂನಬೇವ್ ಮಾರ್ಗದರ್ಶನದಲ್ಲಿ ತೆಕ್ಕಲಕೋಟೆ ವೃತ್ತ ನೀರೀಕ್ಷಕ ಚಂದನ್ ಗೋಪಾಲ್.ವಿ, ಸಿರಿಗೇರಿ ಠಾಣೆಯ ಪಿ.ಎಸ್.ಐ ಶಶಿಧರ.ವೈ, ಹಾಗೂ ಪೇದೆಗಳಾದ ರೋಷನ್ ಜಮೀರ್, ಗಂಗಾಧರ, ಮಹೇಶ ಬಣಕಾರ್ ಹಾಗೂ ಗಾದಿಲಿಂಗಪ್ಪ, ಪ್ರಭಾಕರ, ರಾಮಕೃಷ್ಣ, ಅಮರೇಶ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಶೋಭಾರಾಣಿ ವಿ.ಜೆ, ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 