ಕೆ-ಸೆಟ್ ಪರೀಕ್ಷೆಯಲ್ಲಿ ಬಸವಪ್ರಭು ಕೋರೆ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ
ಚಿಕ್ಕೋಡಿ 25 : ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್) 2026ರಲ್ಲಿ ಚಿಕ್ಕೋಡಿಯ ಕೆಎಲ್ಇ ಸಂಸ್ಥೆಯ ಬಸವಪ್ರಭು ಕೋರೆ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಜೀವ ವಿಜ್ಞಾನ ವಿಷಯದಲ್ಲಿ ಅರ್ಹತೆ ಪಡೆದು ಸಾಧನೆ ಮಾಡಿದ್ದಾರೆ. ಕಾಲೇಜಿನ ಎಂಎಸ್ಸಿ ಸಸ್ಯಶಾಸ್ತ್ರ ವಿಭಾಗದ 2025-26ನೇ ಸಾಲಿನ ವಿದ್ಯಾರ್ಥಿನಿ ವಿಜಯಲಕ್ಷ್ಮಿ ದೀಪ್ಸಿರ್ 172 ಅಂಕ ಹಾಗೂ ಸ್ವಾಗತ ಜಾಧವ 174 ಅಂಕಗಳಿಸಿ ಕೆ-ಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು, ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ, ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.ಕೆಎಲ್ಇ ಸಂಸ್ಥೆಯ ಬಸವಪ್ರಭು ಕೋರೆ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಎ ಪ್ಲಸ್ ಮಾನ್ಯತೆ ಪಡೆದಿದ್ದು, ವಿದ್ಯಾರ್ಥಿಗಳ ಸಾಧನೆ ಕಾಲೇಜಿನ ಶೈಕ್ಷಣಿಕ ಗುಣಮಟ್ಟಕ್ಕೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದೆ.