ಬೆಳಗಾವಿ

ಕೆ-ಸೆಟ್ ಪರೀಕ್ಷೆಯಲ್ಲಿ ಮೂಡಲಗಿಯ ಏಳು ಹಳೆ ವಿದ್ಯಾರ್ಥಿಗಳ ಸಾಧನೆ

ಕೆ-ಸೆಟ್ ಪರೀಕ್ಷೆಯಲ್ಲಿ ಮೂಡಲಗಿಯ ಏಳು ಹಳೆ ವಿದ್ಯಾರ್ಥಿಗಳ ಸಾಧನೆ

ಲೋಕದರ್ಶನ ವರದಿ 

          ಬೆಳಗಾವಿ 23 : ಜಿಲ್ಲೆಯ ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಸಹಾಯಕ ಪ್ರಾಧ್ಯಾಪಕರ ಆಯ್ಕೆಗೆ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟಾರೆಯಾಗಿ, ಏಳು ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ತೇರ್ಗಡೆ ಹೊಂದಿ, ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ.

         ಇಂಗ್ಲೀಷ್ ವಿಷಯದಲ್ಲಿ ರೇಷ್ಮಾ ಮಾದರ ಮತ್ತು ಸದಾನಂದ ಢವಳೇಶ್ವರ, ಅರ್ಥಶಾಸ್ತ್ರ ವಿಷಯದಲ್ಲಿ ಗಾಯತ್ರಿ ಕುಂದರಗಿ ಮತ್ತು ಪ್ರಥಮ ಕದಂ, ವಾಣಿಜ್ಯಶಾಸ್ತ್ರ ವಿಷಯದಲ್ಲಿ ಭರಮಣ್ಣ ರೊಡ್ಡನ್ನವರ, ಸಮಾಜಶಾಸ್ತ್ರ ವಿಷಯದಲ್ಲಿ ಬಸವರಾಜ ಮೂಡಲಗಿ ಹಾಗೂ ಕನ್ನಡ ವಿಷಯದಲ್ಲಿ ಬೀರ​‍್ಪ ಬಡಕುಂದ್ರಿ ಅವರು ಈ ಸಾಧನೆ ಮಾಡಿರುವ ಹಳೆಯ ವಿಧ್ಯಾರ್ಥಿಗಳು.

            ಅವರ ಈ ಸಾಧನೆಗೆ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಸದಸ್ಯರು, ಪ್ರಾಂಶುಪಾಲರಾದ ಮಹೇಶ ವಾಯ್ ಕಂಬಾರ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಕೋರಿರುತ್ತಾತೆ. 


ಸುದ್ದಿ ಓದಿ