ಜಮಖಂಡಿ

ಬಸವಜ್ಯೋತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಕ್ರೀಡಾ ಸಾಧನೆ

ಬಸವಜ್ಯೋತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಕ್ರೀಡಾ ಸಾಧನೆ

ಜಮಖಂಡಿ 25: ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ನಡೆದ 2023-24ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದ ಬಾಲಕರ 65 ಕೆಜಿ ಕುಸ್ತಿ ವಿಭಾಗದಲ್ಲಿ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಭಿನಂದನ ಜುಗಳ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ. 

ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಬಾಗಲಕೋಟೆ ಜಿಲ್ಲೆ ಹಾಗೂ ಗಲಗಲಿಯ ಶ್ರೀಗಾಲವ ಶಿಕ್ಷಣ ಸಂಸ್ಥೆಯ ನ್ಯೂ ಇಂಗ್ಲಿಷ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. 

ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಬಾಲಕಿಯರ ಡಿಸ್ಕ್‌ಸ್ ಥ್ರೋ ವಿಭಾಗದಲ್ಲಿ ಬಸವಜ್ಯೋತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶೋಭಾ ಕಣಬೂರ ಪ್ರಥಮ ಸ್ಥಾನ ಗಳಿಸಿ ಹಾಗೂ ಬಾಲಕರ ವಿಭಾಗದ 100 ಮೀ ಓಟದ ಸ್ಪರ್ಧೆಯಲ್ಲಿ ಮಲ್ಲಯ್ಯ ಹಿರೇಮಠ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶೋಭಾ ಕಣಬೂರ ಶಾಟ್‌ಪುಟ್ ಸ್ಪರ್ಧೆಯಲ್ಲೂ ಸಹ ತೃತೀಯ ಸ್ಥಾನ ಪಡೆದಿದ್ದಾರೆ. ಈ ಸ್ಪರ್ಧೆಗಳು ಸ್ಥಳೀಯ ಜ್ಞಾನಗಂಗೋತ್ರಿ ವಿಜ್ಞಾನ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ನಡೆದಿದ್ದವು. 


ಸುದ್ದಿ ಓದಿ