ಧಾರವಾಡ - ಹುಬ್ಬಳ್ಳಿ

ಕುಸ್ತಿ ಸ್ಪರ್ಧೆಯಲ್ಲಿ ಜೆ.ಎಸ್‌.ಎಸ್‌. ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಸಾಧನೆ

ಕುಸ್ತಿ ಸ್ಪರ್ಧೆಯಲ್ಲಿ ಜೆ.ಎಸ್‌.ಎಸ್‌. ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಸಾಧನೆ

ಲೋಕದರ್ಶನ ವರದಿ 

ಧಾರವಾಡ 6: ಧಾರವಾಡದ ವಿದ್ಯಾಗಿರಿಯ ಜೆ.ಎಸ್‌.ಎಸ್‌. ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕುಸ್ತಿ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.  

ಕುಸ್ತಿ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಕುಮಾರ ಕರಿಗಾರ ಪ್ರಥಮ ಸ್ಥಾನ ಹಾಗೂ ಸುಶೀಲಕುಮಾರ ದುರ್ಗಣ್ಣವರ ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಪ್ರಥಮ ಸ್ಥಾನ ಪಡೆದ ಕುಮಾರ ಕರಿಗಾರ ಅವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.  

ವಿದ್ಯಾರ್ಥಿಗಳ ಈ ಸಾಧನೆಗೆ ಜೆ.ಎಸ್‌.ಎಸ್‌. ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಮುಖ್ಯೋಪಾಧ್ಯಾಯರಾದ ಪಿ. ಎಸ್‌. ಸುಧಾಮಣಿ, ಜಿನ್ನಪ್ಪ ಕುಂದಗೋಳ, ಮಂಜುನಾಥ ಅಳೇಬಸಪ್ಪ ಹಾಗೂ ಶಾಲೆಯ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. 


ಸುದ್ದಿ ಓದಿ