ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿಗೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರಿಗೆ ಹೋರಾಟ ಸಮಿತಿಯಿಂದ ಮನವಿ
ವಿಜಯಪುರ 20: ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಮುಖಂಡರು ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿಗೆ ಆಗ್ರಹಿಸಿ ಜಿಲ್ಲಾ ಜೆ ಡಿ ಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರಿಗೆ ಮನವಿ ಸಲ್ಲಿಸಿದರು.371(ಜೆ) ಮೀಸಲಾತಿ ಜಾರಿ ಮಾಡುವಾಗ ವಿಜಯಪುರ ಜಿಲ್ಲೆಯನ್ನು ಕೈ ಬಿಟ್ಟಿದ್ದರಿಂದ ಜಿಲ್ಲೆಯ ಜನರಿಗೆ ದೊಡ್ಡ ಅನ್ಯಾಯವಾಗಿದೆ.
ವಿಜಯಪುರ ಜಿಲ್ಲೆಗೆ ಮೀಸಲಾತಿ ಕಲ್ಪಿಸಲು ನಡೆಯುತ್ತಿರುವ ಹೋರಾಟಕ್ಕೆ ಜೆಡಿಎಸ್ ಪಕ್ಷದಿಂದ ಬೆಂಬಲಿಸಲು ಹೋರಾಟಗಾರರು ಮನವಿ ಮಾಡಿದರು.ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಯುವಕರಿಗೆ ನೇಮಕಾತಿಯಲ್ಲಿ ಮೀಸಲಾತಿ,ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿಗುವ ವಿಶೇಷ ಅನುದಾನ ಸೌಲಭ್ಯ ಸೇರಿದಂತೆ ಜಿಲ್ಲೆಯ 25 ಲಕ್ಷ ಜನರ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸಂವಿಧಾನದ 371(ಜೆ) ಗೆ ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆಯನ್ನು ಮೀಸಲಾತಿಯಡಿ ಸೇರಿಸುವುದು ಅತ್ಯಂತ ಅವಶ್ಯಕವಾಗಿದೆ,
ಜಿಲ್ಲೆಯ ಸಮಸ್ತ ಜನರ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಜೆಡಿಎಸ್ ಪಕ್ಷದಿಂದ ಬೆಂಬಲಿಸಬೇಕೆಂದರು.ಮನವಿ ಸ್ವೀಕರಿಸಿದ ಯಂಡಿಗೇರಿ ಅವರು ಹೋರಾಟ ಸಮಿತಿ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೋರಾಟ ಸಮಿತಿ ಹಾಗೂ ಜಿಲ್ಲೆಯ ಜನರ ನ್ಯಾಯಯುತ ಬೇಡಿಕೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಜೆಡಿಎಸ್ ಪಕ್ಷವು ಬೆಂಬಲಿಸುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಜೆಡಿಎಸ್ ಮುಖಂಡರಾದ ಎಸ್ ಎಸ್ ಖಾದ್ರಿ ಇನಾಮದಾರ, ರಾಜು ಹಿಪ್ಪರಗಿ, ಪೀರಪಾಷಾ ಗಚ್ಚಿನಮಹಲ್, ನಗರ ಅಧ್ಯಕ್ಷ ಪ್ರಶಾಂತ ಕಿಣಗಿ, 371(ಜೆ ) ಹೋರಾಟ ಸಮಿತಿಯ ಮುಖಂಡರಾದ ವಿನೋದ ಖೇಡ, ಲಾಯಪ್ಪ ಇಂಗಳೆ, ಅನಿಲ ಇಕ್ಕಡೆ, ಗುರುಲಿಂಗಪ್ಪಗೌಡ ಪಾಟೀಲ ಉಪಸ್ಥಿತರಿದ್ದರು