ಪ್ರಜಾಸೇವಾ ಕಾರ್ಯಕ್ರಮಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಕ್ರಮ
ಇಂಡಿ 24: ಪ್ರಜಾಸೇವಾ ಕಾರ್ಯಕ್ರಮ ಕರ್ನಾಟಕ ಸರ್ಕಾರದ ಮಹತ್ವ ಪೂರ್ಣ ಕಾರ್ಯಕ್ರಮವಾಗಿ.ಈ ಕಾರ್ಯಕ್ರಮಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಂದು ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರು ಹೇಳಿದರು.ಅವರು ಇಂಡಿ ತಾಲ್ಲೂಕಿನ ಭತಗುಣಕಿ ಗ್ರಾಮದ ಶ್ರೀ ಅಂಬಾಭವಾನಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾ ಸೇವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಜನಸೇವೆಯೇ ಜನಾರ್ದನ ಸೇವೆ" ಎಂಬ ಮಾತು ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪ್ರಸಿದ್ಧವಾದುದು. ಯಾವುದೇ ಸರಕಾರ, ಸಂಸ್ಥೆ ಅಥವಾ ಸಮಾಜ ಸೇವಕರ ಮುಖ್ಯ ಧ್ಯೇಯ ಸಾರ್ವಜನಿಕರ ಸೇವೆಯಾಗಿರುತ್ತದೆ. ನಾಗರಿಕರ ದೈನಂದಿನ ಸಮಸ್ಯೆಗಳನ್ನು ಪರಿಹರಿಸಲು, ಸರಕಾರಿ ಯೋಜನೆಗಳನ್ನು ಜನರ ಬಾಗಿಲಿಗೆ ತಲುಪಿಸಲು ಹಾಗೂ ಸಮಾಜದ ಕೊನೆಯ ವ್ಯಕ್ತಿಗೂ ನ್ಯಾಯ ಕಲ್ಪಿಸಲು ಹಮ್ಮಿಕೊಳ್ಳುವ ’ಪ್ರಜಾ ಸೇವೆ’ ಕಾರ್ಯಕ್ರಮಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ.ಹಿಂತಾ ಕಾರ್ಯಕ್ರಮಕ್ಕೆ ಗೈರು ಹಾಜರಾದ ಇಂಡಿ ಉಪವಿಭಾಗಾಧಿಕಾರಿ ಸೇರಿದಂತೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ನಾನು ಹೇಳುವುದಕ್ಕಿಂತ ಮೊದಲೇ ತಕ್ಷಣವೇ ಜಾಗ ಖಾಲಿ ಎಂದು ಮಾರ್ಮಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ವಿಧವಾ ವೇತನ ಅಂಗವಿಕಲ ವೇತನ ಮನಸ್ವಿನಿ ಯೋಜನೆ ಎಸ್ ಎಸ್ ವಾಯ್ ಯೋಜನೆಗಳ ಅಡಿಯಲ್ಲಿ ಮಂಜೂರಾದ ಫಲಾನುಭವಿಗಳಿಗೆ ಪಿಂಚಣಿ ಆದೇಶವನ್ನು ನೀಡಿದರು.ಹಾಗೂ ಸೃಕನ್ಯಾ ಸಮೃದ್ಧಿ ಯೋಜನೆಯ ಅಡಿಯಲ್ಲಿ ಮಕ್ಕಳಿಗೆ ಪಾಸ್ ಬುಕ್ ಗಳನ್ನು ವಿತಣೆಮಾಡಿದರು.ಹಾಗೂ ಸಾರ್ವಜನಿಕರು ರಸ್ತೆ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ದಾರಿ ಸಮಸ್ಯೆ, ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು.ಈ ಸಂದರ್ಭದಲ್ಲಿ ಇಂಡಿ ತಹಶೀಲದಾರ ನಾಗೇಂದ್ರ ಕೊಳಶೆಟ್ಟಿ, ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾದೇವಪ್ಪ ಏವೂರ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಭೀಮಣ್ಣ ಕವಲಗಿ, ಇಂಡಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಪ್ರಶಾಂತ್ ಕಾಳೆ, ಇಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಪ್ಪ ಚನಗೊಂಡ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಸಿ ಸಾಹುಕಾರ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ರುಕ್ಉದ್ದಿನ್ ತದ್ದೇವಾಡಿ ಜಾಹಜೀ ಮಿಸಾಳೆ ಇಂಡಿ ನಗರ ಸಿಪಿಐ ಪ್ರದೀಪ್ ಬೀಸೆ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.ಈ ಕಾರ್ಯಕ್ರಮವನ್ನು ಬಸವರಾಜ ಗೋರನಾಳ ನಿರೂಪಿಸಿದರು.