ಕಾನೂನು ಪ್ರಕಾರ ಸ್ಪೀಕರ್ ಅವರಿಂದ ಕ್ರಮ'
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ತಿಳುವಳಿಕೆ ಉಳ್ಳವರು, ಅನುಭವಿಗಳು. ಅವರು ಅತೃಪ್ತ ಶಾಸಕರ ರಾಜೀನಾಮೆ ಬಿಕ್ಕಟ್ಟು ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕರು ಇಂದು ಸಂಜೆ ಆರು ಗಂಟೆಯೊಳಗೆ ಹಾಜರಾಗಿ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ತಿಳಿಸುವಂತೆ ಸುಪ್ರೀಂಕೋಟರ್್ ಸೂಚಿಸಿದೆ. ಅದರಂತೆ ಶಾಸಕರು ಇಂದು ಹಾಜರಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಸ್ಪೀಕರ್ ಅವರು ಸಂವಿಧಾನದ 192 ವಿಧಿ ಮತ್ತು ಶೆಡ್ಯೂಲ್ಡ್ 10ರ ಪ್ರಕಾರ ಯಾವೆಲ್ಲಾ ಸಾಧ್ಯತೆಗಳಿವೆಯೋ ಅವೆಲ್ಲವನ್ನೂ ಪರಿಶೀಲಿಸಲಿದ್ದಾರೆ. ಅವರು ಸಾಕಷ್ಟು ಕಾನೂನು ತಿಳುವಳಿಕೆ ಇರುವವರು. ಕಾನೂನಿಗೆ ಅನುಗುಣವಾಗಿ ಅವರು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 