ಬಳ್ಳಾರಿ

ಕಿತ್ತೂರುರಾಣಿ ಚೆನ್ನಮ್ಮ ಜಯಂತಿ ಆಚರಣೆಗೆ ಕ್ರಮ: ಎಡಿಸಿ ಮಂಜುನಾಥ

ಕಿತ್ತೂರುರಾಣಿ ಚೆನ್ನಮ್ಮ ಜಯಂತಿ ಆಚರಣೆಗೆ ಕ್ರಮ: ಎಡಿಸಿ ಮಂಜುನಾಥ


ಬಳ್ಳಾರಿ 18: ಸ್ವಾತಂತ್ರ್ಯ ಹೋರಾಟಗಾರ್ತಿ, ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 23ರಂದು ನಗರದ ಸಾಂಸ್ಕೃತಿಕ ಸಮುಚ್ಚಯ ಆವರಣದ ಹೊರಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ತಿಳಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಿತ್ತೂರುರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಮಹನೀಯರ ಜಯಂತಿಗೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ವಿಶೇಷ ಉಪನ್ಯಾಸ ಹಾಗೂ ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ವರ್ಧೆ ಆಯೋಜನೆ ಮಾಡಬೇಕು ಎಂದು ಅವರು ತಿಳಿಸಿದರು. 

ಸಭೆಯಲ್ಲಿ ಭಾಗವಹಿಸಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಮಾಜದ ಮುಖಂಡರುಗಳ ಸಲಹೆ ಸೂಚನೆಗಳನ್ನು ಇದೇ ಸಂದರ್ಭದಲ್ಲಿ ಪಡೆದುಕೊಂಡರು. 

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು. 


ಸುದ್ದಿ ಓದಿ