ಕಬ್ಬಿನ ಬಾಕಿ ಬಿಲ್ ಪಾವತಿಗೆ ಕ್ರಮ : ಜಿಲ್ಲಾಧಿಕಾರಿ ಡಾ.ವಿಶಾಲ್ ಭರವಸೆ

ಬೆಳಗಾವಿ, 08: ಜಿಲ್ಲೆಯ ಸಕ್ಕರೆ ಕಾಖರ್ಾನೆಗಳು ಕಳೆದ ವರ್ಷದಲ್ಲಿ ಬಾಕಿ ಉಳಿಸಿಕೊಂಡಿರುವ 1185 ಕೋಟಿ ರೂಪಾಯಿ ಹಾಗೂ 2017-18 ನೇ ಸಾಲಿನ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಕಬ್ಬಿನ ಬಿಲ್ ಪಾವತಿಗೆ ಸಂಬಂಧಿಸಿದಂತೆ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಅವರು ಭರವಸೆ ನೀಡಿದರು.

ಕಬ್ಬಿನ ಬಿಲ್ ಬಾಕಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಮೇ.8) ನಡೆದ ಕಬ್ಬು ಬೆಳೆಗಾರರು ಮತ್ತು ರೈತ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಖರ್ಾನೆಗಳು ಉಳಿಸಿಕೊಂಡಿರುವ ಬಾಕಿ ಹಣವನ್ನು ರೈತರಿಗೆ ಪಾವತಿಸಲು ಸೂಚನೆ ನೀಡಲಾಗುತ್ತದೆ. ಆದಾಗ್ಯೂ ಬಿಲ್ ಪಾವತಿಸದಿದ್ದರೆ ನಿಯಮಾವಳಿ ಪ್ರಕಾರ ಕ್ರಮ ವಹಿಸಲಾಗುವುದು.

ಕಬ್ಬು ಬೆಳೆಗಾರರ ಸಮಸ್ಯೆ ಬರೀ ಆಥರ್ಿಕ ಸಮಸ್ಯೆಯಲ್ಲ; ಇದು ಸಾಮಾಜಿಕ ಸಮಸ್ಯೆ ಆಗಿರುವುದರಿಂದ ಎಲ್ಲ ದೃಷ್ಟಿಕೋನದಿಂದ ಸಮಸ್ಯೆ ಬಗೆಹರಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟರು.

ಸಭೆಗೆ ಗೈರುಹಾಜರಾದರೆ ಕ್ರಮ-ಎಚ್ಚರಿಕೆ:

ಕಬ್ಬಿನ ಬಿಲ್ ಬಾಕಿ ಪಾವತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಕರೆಯುವ ಸಭೆಗಳಿಗೆ ಸಕ್ಕರೆ ಕಾಖರ್ಾನೆಗಳ ವ್ಯವಸ್ಥಾಪಕ ನಿದರ್ೇಶಕರು ಹಾಜರಾಗದೇ ಬೇರೊಬ್ಬ ಪ್ರತಿನಿಧಿಯನ್ನು ಕಳುಹಿಸುತ್ತಾರೆ. ಇದರಿಂದ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಮುಂದಿನ ಸಭೆಗೆ ಅನಿವಾರ್ಯ ಕಾರಣಗಳನ್ನು ಹೊರತುಪಡಿಸಿ ಕಾಖರ್ಾನೆಗಳ ವ್ಯವಸ್ಥಾಪಕ ನಿದರ್ೇಶಕರೇ ಖುದ್ದಾಗಿ ಹಾಜರಾಗಬೇಕು. ಒಂದು ವೇಳೆ ಸಭೆಗೆ ಗೈರುಹಾಜರಾದರೆ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ತೂಕ-ಅಳತೆ ಪರಿಶೀಲನೆಗೆ ಸೂಚನೆ:

ಮುಂಬರುವ ದಿನಗಳಲ್ಲಿ ತೂಕ ಮತ್ತು ಅಳತೆಯನ್ನು ಪರಿಶೀಲಿಸಲು ಸಕ್ಕರೆ ಕಾಖರ್ಾನೆಗೆ ತೆರಳುವಾಗ ಕಡ್ಡಾಯವಾಗಿ ರೈತರು ಮತ್ತು ಅಧಿಕಾರಿಗಳನ್ನು ಒಳಗೊಂಡಿರುವ ಸಮಿತಿಯ ಸದಸ್ಯರನ್ನು ಕರೆದುಕೊಂಡು ಹೋಗಿ ಅವರ ಸಮ್ಮುಖದಲ್ಲಿಯೇ ಪರಿಶೀಲನೆ ನಡೆಸಬೇಕು ಹಾಗೂ ಪರಿಶೀಲನಾ ಪ್ರಕ್ರಿಯೆಯನ್ನು ದಾಖಲು ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಸೂಚನೆ ನೀಡಿದರು.

ತೂಕ ಮತ್ತು ಅಳತೆಯನಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ  ಆನ್ ಲೈನ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಸಕ್ಕರೆ ಆಯುಕ್ತಾಲಯಕ್ಕೆ ವರದಿ ಕಳಿಸಲಾಗುವುದು ಎಂದರು.

ಬೆಳೆವಿಮೆ ಪರಿಹಾರ ಪಾವತಿಗೆ ಕ್ರಮ:

2016-17 ನೇ ಸಾಲಿನ ಹಿಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ 5.76 ಕೋಟಿ ರೂಪಾಯಿ ಪರಿಹಾರವನ್ನು ತಕ್ಷಣವೇ ರೈತರ ಖಾತೆಗೆ ಜಮಾ ಮಾಡುವಂತೆ ವಿಮಾ ಕಂಪನಿಗೆ ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯ 13,671 ರೈತರ ಖಾತೆಗೆ ಒಂದು ವಾರದೊಳಗೆ ವಿಮಾ ಪರಿಹಾರವನ್ನು ಜಮೆ ಮಾಡಲು ಕ್ರಮವಹಿಸುವಂತೆ ಜಿಲ್ಲಾ ಅಗ್ರಣಿ ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ನಿದರ್ೇಶನ ನೀಡಿದರು.

22 ಮೇವು ಬ್ಯಾಂಕ್ ಸ್ಥಾಪನೆ:

ಜಿಲ್ಲೆಯ ಅಥಣಿಯಲ್ಲಿ 21 ಹಾಗೂ ರಾಮದುರ್ಗ ದಲ್ಲಿ ಒಂದು ಸೇರಿದಂತೆ ಒಟ್ಟಾರೆ 22 ಮೇವು ಬ್ಯಾಂಕ್ ಸ್ಥಾಪಿಸಲಾಗಿದೆ. ಗೋಶಾಲೆಗಳ ಅಗತ್ಯತೆ ಆಧರಿಸಿ ಗೋಶಾಲೆಗಳನ್ನು ಆರಂಭಿಸಲು ತಹಶೀಲ್ದಾರರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ತಿಳಿಸಿದರು.

ಅದೇ ರೀತಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ತಕ್ಷಣವೇ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ನಿದರ್ೇಶನ ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 140 ಖಾಸಗಿ ಕೊಳವೆಬಾವಿಗಳನ್ನೂ ಗುರುತಿಸಲಾಗಿದ್ದು, ಅಗತ್ಯಬಿದ್ದರೆ ಅವುಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಬರ ನಿರ್ವಹಣೆಗೆ 6.50 ಕೋಟಿ ರೂಪಾಯಿ ಬಿಡುಗಡೆಗೆ ಕೂಡ ಜಿಲ್ಲಾಡಳಿತ ಅನುಮೋದನೆ ನೀಡಿದೆ ಎಂದು ವಿವರಿಸಿದರು.

ಶೇ. 15 ರಷ್ಟು ಬಡ್ಡಿ ಪಾವತಿಸಲು ಒತ್ತಾಯ:

ಕಾಖರ್ಾನೆಗಳು ಕಳೆದ ವರ್ಷದಲ್ಲಿ ಒಟ್ಟಾರೆ 1185 ಕೋಟಿ ರೂಪಾಯಿ ಬಾಕಿಯಿದೆ. ಐದಾರು ಸಭೆ ನಡೆಸಿ ಗಡುವು ನೀಡಿದರೂ ಪಾವತಿಸದಿರುವುದರಿಂದ ಶೇ.15 ಬಡ್ಡಿ ಸಮೇತ ಬಾಕಿ ಹಣ ಪಾವತಿಸಬೇಕು ಎಂದು ರೈತ ಮುಖಂಡರಾದ ಶಶಿಕಾಂತ ಜೋಶಿ ಆಗ್ರಹಿಸಿದರು.

ಅದೇ ರೀತಿ 2017-18 ನೇ ಸಾಲಿನಲ್ಲಿ ಕೂಡ ಸಾವಿರ ಕೋಟಿ ರೂಪಾಯಿ ಬಾಕಿ ಉಳಿದಿದ್ದು, ಅದನ್ನೂ ಪಾವತಿಸಲು ಕ್ರಮ ಕೈಗೊಳ್ಳಬೇಕು.

ತೂಕ ಮತ್ತು ಅಳತೆಯಲ್ಲಿ ಕಾಖರ್ಾನೆಗಳು ರೈತರಿಗೆ ಮೋಸ ಮಾಡುತ್ತಿವೆ. ಇದಕ್ಕೆ ಕಡಿವಾಣ ಹಾಕುವುದರ ಜತೆಗೆ ಆನ್ ಲೈನ್ ವ್ಯವಸ್ಥೆಯ ಮೂಲಕ ತೂಕ ಮತ್ತು ಅಳತೆಯಲ್ಲಿ ಪಾರದರ್ಶಕತೆ ತರಬೇಕು ಎಂದು ರೈತ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಪ್ರೋಬೇಷನರಿ ಐ.ಎ.ಎಸ್. ಅಧಿಕಾರಿ ಭವರಸಿಂಗ್ ಮೀನಾ, ಕೃಷಿ ಇಲಾಖೆಯ ಜಂಟಿ ನಿದರ್ೇಶಕ ಜಿಲಾನಿ ಮೊಖಾಶಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿದರ್ೇಶಕ ರಮೇಶ್ ಕೋಲಕಾರ, ತೋಟಗಾರಿಕೆ ಇಲಾಖೆಯ ಉಪನಿದರ್ೇಶಕ ರವೀಂದ್ರ ಹಕಾಟಿ, ತೂಕ ಮತ್ತು ಅಳತೆ ಇಲಾಖೆಯ ಉಪ ನಿದರ್ೇಶಕರಾದ ಉಪ್ಪಾರ್, ಜಿಲ್ಲಾ ಸಹಕಾರ ಇಲಾಖೆಯ ಉಪ ನಿಬಂಧಕರು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದರ್ೇಶಕ ದೊಡ್ಡ ಬಸವರಾಜ್ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

ರೈತ ಮುಖಂಡರಾದ ಶಶಿಕಾಂತ ಜೋಶಿ, ಚೂನಪ್ಪ ಪೂಜಾರಿ, ಅಶೋಕ ಯಮಕನಮರಡಿ, ಜಯಶ್ರೀ ಮತ್ತಿತರರು ಸಭೆಯಲ್ಲಿ ಮಾತನಾಡಿದರು.