ನಿಗದಿತ ಸಮಯಕ್ಕೆ ವೇತನ ಪಾವತಿಗೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
Action to ensure timely payment of salaries
ಬೆಳಗಾವಿ ಸುವರ್ಣ ವಿಧಾನಸೌಧ ಡಿ.12 : ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ಮಾಹೆಯಲ್ಲಿ ನಿರ್ದೇಶನ ನೀಡಲಾಗಿದೆ. ಅದರಂತೆ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.ಪರಿಷತ್ತಿನಲ್ಲಿ ಡಿ.12ರಂದು ಸದಸ್ಯರಾದ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ಸಚಿವರು,
ಕೆಲವು ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ಬೇಡಿಕೆ ಕಡಿಮೆ ಇರುವುದರಿಂದ ಗ್ರಂಥಾಲಯ ಮೇಲ್ವಿಚಾರಕರಿಗೆ ವೇತನ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಕೊರತೆ ಇರುವುದರಿಂದ ಅಂತಹ ಜಿಲ್ಲೆಗಳಲ್ಲಿ ಬಾಕಿ ವೇತನವನ್ನು ಪಾವತಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಪರೀಶೀಲನೆಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಗೆ ಸಂಬಂಧಿಸಿದಂತೆ 2025-26 ನೇ ಸಾಲಿನಲ್ಲಿ ಮಾರ್ಚ್ 2025 ರಿಂದ ನವೆಂಬರ್ 2025ರವರೆಗೆ 03 ತ್ರೈಮಾಸಿಕ ಕಂತುಗಳಲ್ಲಿ ಒಟ್ಟು ರೂ.60,49,75,549 ಗಳ ಗೌರವ ಧನವನ್ನು ನೇರವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಬಿಡುಗಡೆ ಮಾಡಲಾಗಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಪಿಡಿಓ ಮೇಲೆ ಕ್ರಮ: ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗ್ಯವತಿ ಅಗ್ನಿಮಠ ಅವರು ದಿ.13.10.2025ರಂದು ಮೃತಪಟ್ಟಿದ್ದಾರೆ. ಇವರಿಗೆ 2 ತಿಂಗಳ ವೇತನ ಪಾವತಿಯು ಗ್ರಾಮ ಪಂಚಾಯತಿ ಹಂತದಲ್ಲಿ ವಿಳಂಬವಾಗಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 