ಕಸ ಸಂಗ್ರಹಿಸಲು ಬಳಸುವ ವಾಹನಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ
ಬಳ್ಳಾರಿ 16: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಿಸಲು ಬರುವ ವಾಹನಗಳ ಸಂಖ್ಯೆ ಸದ್ಯದಲ್ಲಿ ಕಡಿಮೆ ಇದ್ದು, ಅವುಗಳನ್ನು ಹೆಚ್ಚಿಸಲು ಯೋಜನೆಯೊಂದನ್ನು ರೂಪಿಸಲಾಗಿದೆ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಹೇಳಿದರು.ಕ್ಷೇತ್ರಜನಸಂಪರ್ಕ ಕಾಯರ್ಾಲಯ, ಮಹಾನಗರ ಪಾಲಿಕೆ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ,ಅಲ್ಲಂ ಸುಮಂಗಳಮ್ಮ ಮಹಿಳಾ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಗರದ ಅಲ್ಲಂ ಸುಮಂಗಳಮ್ಮ ಮಹಿಳಾ ಪಿಯು ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನ(ನಗರ) ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ನಗರದಲ್ಲಿ ಕಸ ಸಂಗ್ರಹಿಸುವ ವಾಹನಗಳ ಸಂಖ್ಯೆ ಕಡಿಮೆ ಇರುವ ಕಾರಣ ಪ್ರತಿದಿನ ಮನೆಮನೆಗೆ ತೆರಳಿ ಕಸವನ್ನು ಸಮರ್ಪಕವಾಗಿ ಸಂಗ್ರಹಿಸುವ ಕೆಲಸವಾಗುತ್ತಿಲ್ಲ ಎಂದು ಹೇಳಿದ ಅವರು, ಕೇಂದ್ರ ಸರಕಾರದ ಸಹಾಯದೊಂದಿಗೆ ಯೋಜನೆಯೊಂದನ್ನು ತಯಾರಿಸಿ ಅಧಿವೇಶನದಲ್ಲಿ ಚಚರ್ಿಸಿ ಸೂಕ್ತಕ್ರಮಕೈಗೊಳ್ಳಲಾಗುವುದು ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಲೋಚನೆ, ಸ್ವಚ್ಛವಾದ ಮನೆ ಹಾಗೂ ಪರಿಸರದ ಶುದ್ಧತೆ, ದೇಶದ ಹೆಣ್ಮಕ್ಕಳನ್ನು ಗೌರವವಾಗಿಡಲು ಸ್ವಚ್ಛಭಾರತ ಅಭಿಯಾನ ಪ್ರಾರಂಭಿಸಿದ್ದಾರೆ ಎಂದರು.ಪ್ರತಿಯೊಬ್ಬ ವಿದ್ಯಾಥರ್ಿ ಐದು ಮನೆಗಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದ್ದಲ್ಲಿ ಸ್ವಚ್ಛ ಭಾರತವಾಗುವ ಮತ್ತು ಗಾಂಧೀಜಿ ಹಾಗೂ ನರೇಂದ್ರ ಮೋದಿ ಅವರ ಕನಸು ನನಸಾಗುವುದರಲ್ಲಿ ಸಂದೇಹವಿಲ್ಲ ಎಂದರು.
ಬಳ್ಳಾರಿ ನಗರದಲ್ಲಿ ತಾಪಮಾನ ದಿನೇದಿನೇ ಹೆಚ್ಚುತ್ತಿದ್ದು, ಇದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 2ರಿಂದ 3ಲಕ್ಷ ಮರಗಳನ್ನು ಬೆಳೆಸಬೇಕಾಗಿದೆ ಎಂದರು.ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದಶರ್ಿ ಚೋರನೂರು ಕೊಟ್ರಪ್ಪ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಈ ಸ್ವಚ್ಛಭಾರತ ಯೋಜನೆಗೆ ಎಲ್ಲರು ಕೈ ಜೋಡಿಸಬೇಕು ಎಂದರು.
ಶಾಲಾ-ಕಾಲೇಜು ವಿದ್ಯಾಥರ್ಿಗಳಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಮ್ಮ ಕಾಲೇಜಿನಲ್ಲಿ ಈ ಕಾರ್ಯಕ್ರಮ ಏರ್ಪಡಿಸಿರುವುದು ಸಂತಸ ತಂದಿದೆ ಎಂದರು.ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಡೇದ ಬಸವರಾಜ,ಕೋಶಾಧಿಕಾರಿ ಕೋಳೂರು ಮಲ್ಲಿಕಾಜರ್ುನಗೌಡ, ಪ್ರಥಮ ದಜರ್ೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ವೈ.ತಿಮ್ಮರೆಡ್ಡಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡಾ.ಗೋವಿಂದರಾಜು ಅವರು ಮಾತನಾಡಿದರು.
ಮಹಾನಗರ ಪಾಲಿಕೆಯ ಪರಿಸರ ಎಂಜನಿಯರ್ ಟಿ.ಶ್ರೀನಿವಾಸ್ ಅವರು ವಿಶೇಷ ಉಪನ್ಯಾಸ ನೀಡಿದರು. ಸಂಗೀತ ಮತ್ತು ನಾಟಕ ವಿಭಾಗದ ಎರಡು ಕಲಾತಂಡಗಳ ಮೂಲಕ ಸ್ವಚ್ಛತೆಯ ಕುರಿತು ಅರಿವು ಮೂಡಿಸಲಾಯಿತು. ಕ್ಷೇತ್ರ ಜನಸಂಪರ್ಕ ಕಾಯರ್ಾಲಯದ ಉಪನಿದರ್ೇಶಕ ಡಾ.ಜಿ.ಡಿ.ಹಳ್ಳಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪಧರ್ೆಗಳನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾಥರ್ಿಗಳಿಗೆ ಬಹುಮಾನ ವಿತರಿಸಲಾಯಿತು. ಕ್ಷೇತ್ರ ಜನಸಂಪರ್ಕ ಕಾಯರ್ಾಲಯದ ಸಹಾಯಕ ಎನ್.ರಾಮಕೃಷ್ಣ ನಿರೂಪಿಸಿ ವಂದಿಸಿದರು.