ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರನ ಮೇಲೆ ಮಂಗಳಮುಖಿಯರಿಂದ ದಾಳಿ !
ಬೆಂಗಳೂರು, ಸೆ. 8 ಸ್ಯಾಂಡಲ್ ವುಡ್ ನ ಹಾಸ್ಯನಟ ಬುಲೆಟ್ ಪ್ರಕಾಶ್ ಪುತ್ರನ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿ ಬಂದಿದೆ.
ಮಂಗಳವಾರ ರಾತ್ರಿ 9 ಗಂಟೆಗೆ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್, ಜಿಮ್ನಿಂದ ಮನೆಗೆ ವಾಪಸ್ಸಾಗುತ್ತಿದ್ದ ಹೆಬ್ಬಾಳ ಬಳಿ ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಹೆಬ್ಬಾಳ ಪ್ಲೈ ಓವರ್ ಬಳಿ ಮಂಗಳಮುಖಿಯರು ರಕ್ಷಕ್ ಬ್ಯಾಗ್ ಹಿಡಿದು ಎಳೆದಿದ್ದು, ಪರಿಣಾಮ ರಕ್ಷಕ್ ಬೈಕ್ನಿಂದ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ರಕ್ಷಕ್ ಕಾಲಿಗೆ ತರಚಿದ ಗಾಯಗಳಾಗಿವೆ. ಅಲ್ಲದೇ, ಮಂಗಳಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ರಕ್ಷಕ್ ಫ್ಲೈ ಓವರ್ ಮೇಲೆಯೇ ಬೈಕ್ ಬಿಟ್ಟು ಓಡಿಹೋಗಿದ್ದಾನೆ ಎನ್ನಲಾಗಿದೆ.
ನಂತರ ಹೆಬ್ಬಾಳ ಪೊಲೀಸರ ಸಹಾಯದಿಂದ ರಕ್ಷಕ್ ತನ್ನ ಬೈಕ್ ತೆಗೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ.
ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.