ನಟಿ ರಿಯಾ ಚಕ್ರವರ್ತಿ ಜೈಲಿನಿಂದ ಬಿಡುಗಡೆ
ಮುಂಬೈ ಅಕ್ಟೋಬರ್ 7: ಸುಶಾಂತ್ ಸಿಂಗ್ ಸಾವಿನ ಅರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಿಯಾ ಚಕ್ರವರ್ತಿ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದ ರಿಯಾಗೆ ಬಾಂಬೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು.
ಹೀಗಾಗಿ ಪ್ರಕರಣದಲ್ಲಿ ಬೈಕುಲ್ಲಾ ಜೈಲಿನಲ್ಲಿದ್ದಂತ ರಿಯಾ ಚಕ್ರವರ್ತಿ, ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ಮತ್ತು ಕುಟುಂಬದವರ ವಿರುದ್ಧ ಸುಶಾಂತ್ ಸಿಂಗ್ ತಂದೆ ಪ್ರಕರಣ ದಾಖಲಿಸಿದ್ದರು.