ನಟಿ ಸಂಜನಾ ಗಲ್ರಾನಿ ಬಂಧನ
ಬೆಂಗಳೂರು, ಸೆಪ್ಟೆಂಬರ್ 08 : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿ ನಟಿ ಗಲ್ರಾನಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆ ಆಕೆಯ ಮನೆಯ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು, ವಿಚಾರಣೆ ನಡೆಸಿದ ನಂತರ ಹೆಚ್ಚಿನ ಮಾಹಿತಿಗಾಗಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿ ಬಂಧಿತರಾದ ಎರಡನೇ ಆರೋಪಿ ಸಂಜನಾ ಗಲ್ರಾನಿ ಆಗಿದ್ದಾರೆ. ಈ ಮೊದಲು ನಟಿ ರಾಗಿಣಿ ಬಂಧನವಾಗಿದ್ದು, ಸಿಸಿಬಿ ವಿಚಾರಣೆ ಎದುರಿಸುತ್ತಿದ್ದಾರೆ.