ಡ್ರಗ್ಸ್ ಪ್ರಕರಣ : ನಟಿ ಸಂಜನಾಗೆ ನ್ಯಾಯಾಂಗ ಬಂಧನ
ಬೆಂಗಳೂರು,
ಸೆಪ್ಟೆಂಬರ್ 16: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ನಂಟು ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ
ಅವರಿಗೆ ಒಂದನೇ ಎಸಿಎಂಎಂ ನ್ಯಾಯಾಲಯ 2 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣವನ್ನು 33ನೇ ಎಸಿಎಂಎಂ ನ್ಯಾಯಾಲಯಕ್ಕೆ ವರ್ಗಾಯಿಸಿದ್ದು, ಇದೇ 18ರಂದು ಹಾಜರುಪಡಿಸಲು ಸೂಚಿಸಿದೆ.
ಕಳೆದ 11 ದಿನಗಳಿಂದ ಸಿಸಿಬಿ ವಿಚಾರಣೆಯಲ್ಲಿದ್ದ ಸಂಜನಾ, ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದರು. ಜಾಮೀನು ಪಡೆದು ಹೊರಬರುವ ಅವರ ಪ್ರಯತ್ನ ವ್ಯರ್ಥವಾಗಿದೆಯಾದರೂ, ಕೇವಲ 2 ದಿನ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.
ಇದೇ ವೇಳೆ, ಆರೋಪಿಗಳಾದ ವೀರೇನ್ ಖನ್ನಾ ಹಾಗೂ ರವಿಶಂಕರ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.