ಸರ್ವಜ್ಞ ವಿದ್ಯಾಪೀಠದಲ್ಲಿ ವ್ಯಸನ ಮುಕ್ತ ದಿನಾಚರಣೆ: ದುಶ್ಚಟಗಳಿಂದ ದೂರವಿರಲು ಕರೆ
Addiction-free day observed at Sarvajna Vidyapeetha: Call to stay away from vices
ತಾಳಿಕೋಟೆ 02 : ಪಟ್ಟಣದ ಸರ್ವಜ್ಞ ವಿದ್ಯಾಪೀಠದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಲಿಂಗೈಕ್ಯ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಶನಿವಾರ ವ್ಯಸನ ಮುಕ್ತ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರು ಮಾತನಾಡಿ, ರಾಜ್ಯ ಸರ್ಕಾರವು ಪ್ರತಿ ವರ್ಷ ಆಗಸ್ಟ್ 1ರಂದು ವ್ಯಸನ ಮುಕ್ತ ದಿನವನ್ನು ಆಚರಿಸುವ ಮೂಲಕ ಸಮಾಜದಲ್ಲಿ ಮಾದಕ ವಸ್ತುಗಳು ಹಾಗೂ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಂಡಿದೆ ಎಂದು ಹೇಳಿದರು.
ಲಿಂಗೈಕ್ಯ ಡಾ. ಮಹಾಂತ ಶಿವಯೋಗಿಗಳು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಆದರ್ಶಗಳು ಮತ್ತು ವಿಚಾರಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿವೆ. ಅವರ ಕನಸಿನಂತೆ ವ್ಯಸನಮುಕ್ತ ಹಾಗೂ ಸುಸ್ಥಿರ ಕರ್ನಾಟಕ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು. ಅದುವೇ ಅವರಿಗೆ ಸಲ್ಲಿಸುವ ನಿಜವಾದ ಜನ್ಮದಿನದ ಗೌರವವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಗುರು ಸಂತೋಷ ಪವಾರ ಸೇರಿದಂತೆ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 