ಬಾಲಕಾರ್ಮಿಕ ಮುಕ್ತ ಸಮಾಜ ರೂಪಿಸಲು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಕರೆ

ಬಾಲಕಾರ್ಮಿಕ ಮುಕ್ತ ಸಮಾಜ ರೂಪಿಸಲು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಕರೆ  Additional District Collector E. Balakrishna calls for creating a child labor-free society

ವಿಜಯನಗರ (ಹೊಸಪೇಟೆ) 13:  ಸಮಾಜದಲ್ಲಿ ಬಡತನವಿದ್ದರೂ ಅದನ್ನು ಹೋಗಲಾಡಿಸಲು ಸರ್ಕಾರ ಪಂಚ ಗ್ಯಾರಂಟಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಿದ್ದೂ ಬಡತನದ ನೆಪವೊಡ್ಡಿ ಮಕ್ಕಳನ್ನು ಶಾಲೆಗೆ ಕಳುಹಿಸದೆ ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಪ್ರತಿಯೊಬ್ಬರೂ ಕೈಜೋಡಿಸಿದರೆ ಮಾತ್ರ ಬಾಲಕಾರ್ಮಿಕ ಮುಕ್ತ ಸಮಾಜ ರೂಪಿಸಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಅವರು ಹೇಳಿದರು.  

ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ವಕೀಲರ ಸಂಘ, ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.