ಮಾಧ್ಯಮ ಧರ್ಮ, ಸತ್ಯತೆ ಮತ್ತು ವೃತ್ತಿಪರತೆಗೆ ಬದ್ಧರಾಗಿರಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರ್ಪ ಕರೆ
Adhere to media ethics, truthfulness, and professionalism: Upa Lokayukta Justice B. Veerappa calls u
ವಿಜಯನಗರ (ಹೊಸಪೇಟೆ), ಜು.25: ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸಮಾಜದ ಹಿತಕ್ಕಾಗಿ ಕಾರ್ಯನಿರ್ವಹಿಸಬೇಕು. ಪತ್ರಕರ್ತರು ವೃತ್ತಿಧರ್ಮ, ಸತ್ಯಸಂಧತೆ, ನಿಷ್ಪಕ್ಷಪಾತತೆ ಹಾಗೂ ಧೈರ್ಯವನ್ನು ಅಳವಡಿಸಿಕೊಂಡು ಕೆಲಸ ಮಾಡಬೇಕು ಎಂದು ರಾಜ್ಯ ಉಪ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿ ಬಿ. ವೀರ್ಪ ಕರೆ ನೀಡಿದರು.
ವಿಜಯನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೊಸಪೇಟೆಯ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸುಳ್ಳು ಸುದ್ದಿಗೆ ಅವಕಾಶ ಕೊಡಬೇಡಿ ಯಾವುದೇ ಆಮಿಷ, ಒತ್ತಡ ಅಥವಾ ಹಣದ ಆಸೆಗೆ ಒಳಗಾಗಿ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಬಾರದು. ಸಮಾಜದ ಧ್ವನಿಯಾಗಿ ಪತ್ರಕರ್ತರು ನಿಷ್ಠೆಯಿಂದ ಕೆಲಸ ಮಾಡಬೇಕು. ಪತ್ರಕರ್ತರ ಕೈಯಲ್ಲಿರುವ ಪೆನ್ ಸತ್ಯವನ್ನು ಹೊರತರುವ ಆಯುಧವಾಗಿರಬೇಕು ಎಂದು ಹೇಳಿದರು.
ಬ್ಲ್ಯಕ್ಮೇಲ್ ಪತ್ರಿಕೋದ್ಯಮಕ್ಕೆ ಎಚ್ಚರಿಕೆ ಮೊಬೈಲ್ ಮತ್ತು ಯೂಟ್ಯೂಬ್ ಚಾನೆಲ್ಗಳ ಹೆಸರಿನಲ್ಲಿ ಅಧಿಕಾರಿಗಳು, ವ್ಯಾಪಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುವ ಪ್ರವೃತ್ತಿ ಪತ್ರಿಕೋದ್ಯಮಕ್ಕೆ ಕಳಂಕವಾಗಿದೆ. ಇಂತಹ ಕೃತ್ಯಗಳು ತಕ್ಷಣ ನಿಲ್ಲಬೇಕು ಎಂದು ಎಚ್ಚರಿಕೆ ನೀಡಿದರು.
ಸುಳ್ಳು ಮಾಹಿತಿ ನೀಡಿದರೆ ಶಿಕ್ಷೆ ಸುದ್ದಿ ಪ್ರಕಟಿಸುವ ಮುನ್ನ ಅದರ ಸತ್ಯಾಸತ್ಯತೆ ಪರೀಶೀಲಿಸುವುದು ಕಡ್ಡಾಯ. ಲೋಕಾಯುಕ್ತ ಕಾಯ್ದೆಯಡಿ ಸುಳ್ಳು ದೂರು ಅಥವಾ ಸುಳ್ಳು ಮಾಹಿತಿ ನೀಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.
ಲೋಕಾಯುಕ್ತದ ಅನುಭವ ಹಂಚಿಕೆ ತಮ್ಮ ಸೇವಾ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ, ಪರಿಸರ ನಾಶ, ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು ಮತ್ತು ಅಂಗನವಾಡಿಗಳಲ್ಲಿನ ಮೂಲಸೌಕರ್ಯ ಕೊರತೆ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೆರವು ಒದಗಿಸಿದ ಪ್ರಕರಣಗಳು ಸೇರಿದಂತೆ ಹಲವು ಅನುಭವಗಳನ್ನು ಹಂಚಿಕೊಂಡರು.
ದೇಶಭಕ್ತಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡುವಂತೆ ಮನವಿ ಪ್ರತಿದಿನ ಕನಿಷ್ಠ 10 ನಿಮಿಷಗಳ ಕಾಲ ದೇಶಭಕ್ತಿ, ಸೈನಿಕರ ತ್ಯಾಗ, ಭಾರತೀಯ ಸಂಸ್ಕೃತಿ ಹಾಗೂ ರಾಷ್ಟ್ರಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಮಾಧ್ಯಮಗಳು ಪ್ರಸಾರ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪತ್ರಿಕಾ ದಿನಾಚರಣೆ ಅಂಗವಾಗಿ ನಡೆದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪಿ. ಸತ್ಯನಾರಾಯಣ ಸೇರಿದಂತೆ ಲೋಕಾಯುಕ್ತ, ಪೊಲೀಸ್, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 