ಆದಿಜಾಂಬವ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಭ್ರಮದಿಂದ ಜರುಗಿದ ಜನ್ಮ ದಿನಾಂಕ ಅರಿಯದವರ ದಿನಾಚರಣೆ, ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
Adijambava Kannada Medium High School celebrated the Day of Unknown Births and the school commenceme
ಲೋಕದರ್ಶನ ವರದಿ
ಮುಂಡಗೋಡ 01 : ಕರ್ನಾಟಕ ದಲಿತ ಸಂಘರ್ಷ ಸಮಿತಿ, ಆದಿಜಾಂಬವ ಕನ್ನಡ ಮಾಧ್ಯಮ ಪ್ರೌಢಶಾಲೆ ಮುಂಡಗೋಡ ಆಶ್ರಯದಲ್ಲಿ ಇಂದು ಸೋಮವಾರ ಆದಿಜಾಂಬವ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಜನ್ಮ ದಿನಾಂಕ ಅರಿಯದವರ ದಿನಾಚರಣೆ ಮತ್ತು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು.ಈ ಕಾರ್ಯಕ್ರಮವನ್ನು ಸಿಪಿಐ ರಮೇಶ ಹಾನಾಪುರ್ ಉದ್ಘಾಟಿಸಿದರು. ಆದಿಜಾಂಬವ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಸ್.ಫಕ್ಕೀರ್ಪ ಅಧ್ಯಕ್ಷತೆ ವಹಿಸಿದ್ದರು.
ಗುಡ್ಡಪ್ಪ ಹರಿಜನ ಕೇಕ್ ಕತ್ತರಿಸಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ರಾಜಶೇಖರ ನಾಯಕ ಹಾಗೂ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಗೋಪಾಲ ನಡಕಿನಮನಿ ಆಗಮಿಸಿದ್ದರು.ಕಾರ್ಯಕ್ರಮದಲ್ಲಿ ಕಾಯಕಯೋಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ನಜಿರುದ್ದೀನ್ ತಾಡಪತ್ರಿ ಅವರನ್ನು ಸನ್ಮಾನಿಸಲಾಯಿತು.ಆದಿಜಾಂಬವ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಎಸ್.ಡಿ.ಮುಡಣ್ಣವರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅತಿಥಿಗಳಾಗಿ ಟಿಬೆಟಿಯನ್ ಹಿರಿಯ ಬೌದ್ದ ಸನ್ಯಾಸಿ ಜಂಪಾ ಲೊಬಸಾಂಗ್ ಮುಖಂಡರಾದ ಹನುಮಂತ್ ಕಟ್ಟಿಮನಿ, ಜೂಜೆ ಸಿದ್ದಿ ಸಂಗೀತಾ ಚಲವಾದಿ, ಸಂತೋಷ್ ಕಟ್ಟಿಮನಿ, ದ್ಯಾಮಣ್ಣ ನಾಗರಾಜ್ ಕಟ್ಟೆಮನಿ, ಪ್ರಭು ಅರಶಿಣಗೇರಿ, ಮಡ್ಲಿ, ಪರಶುರಾಮ ಪೂಜಾರ ಆಗಮಿಸಿದ್ದರು. ಲಕ್ಷ್ಮಣ ಬಂಡಿವಡ್ಡರ ಹಾಜರಿದ್ದರು. ಇದೇ ಸಂದರ್ಭದಲ್ಲಿ ಸಿಪಿಐ ರಮೇಶ ಹಾನಾಪುರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ರಾಜಶೇಖರ ನಾಯಕ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕ ರವಿ ಅಕ್ಕಿವಳ್ಳಿ ಕಾರ್ಯಕ್ರಮ ನಿರೂಪಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 