ಭತ್ತದ ಬೆಳೆಯಲ್ಲಿ ದುಂಡಾಣು ಎಲೆ ಚುಕ್ಕಿ ರೋಗ ನಿರ್ವಹಣೆಗೆ ಮುಂಜಾಗ್ರತಾ ಕ್ರಮವಹಿಸಲು ಸಲಹೆ
Advice on taking preventive measures to manage roundworm leaf spot disease in rice crops
ಭತ್ತದ ಬೆಳೆಯಲ್ಲಿ ದುಂಡಾಣು ಎಲೆ ಚುಕ್ಕಿ ರೋಗ ನಿರ್ವಹಣೆಗೆ ಮುಂಜಾಗ್ರತಾ ಕ್ರಮವಹಿಸಲು ಸಲಹೆ
ಬಳ್ಳಾರಿ 10:
ಜಿಲ್ಲೆಯ ವಿವಿಧೆಡೆ ಮುಂಗಾರು ಹಂಗಾಮಿನಲ್ಲಿ ರೈತರು ವಿವಿಧ ಭತ್ತದ ತಳಿಗಳ ಬೆಳೆದ ಬೆಳೆಯಲ್ಲಿ ದುಂಡಾಣು ಎಲೆ ಚುಕ್ಕಿ ರೋಗ ಕಂಡುಬಂದಿದ್ದು, ನಿರ್ವಹಣೆಗೆ ರೈತರು ಸೂಕ್ತ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳು ರೈತರಿಗೆ ಸಲಹೆ ನೀಡಿದ್ದಾರೆ.
ಬುಧವಾರ ಜಂಟಿ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ಅಧಿಕಾರಿಗಳು ಮತ್ತು ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ತಂಡದೊಂದಿಗೆ ಕಂಪ್ಲಿ ತಾಲೂಕಿನ ಸಣಾಪುರ, ಇಟಗಿ, ಮುದ್ದಾಪುರ ಗ್ರಾಮದ ಭತ್ತ ಕ್ಷೇತ್ರಕ್ಕೆ ಭೇಟಿ ನೀಡಿ ಪರೀಶೀಲಿಸಿ ರೈತರೊಂದಿಗೆ ಚರ್ಚಿಸಿದ್ದಾರೆ.
ಕೆಲವು ಭಾಗಗಳಲ್ಲಿ ತಡವಾಗಿ ನಾಟಿ ಮಾಡಿದ ಭತ್ತ ಬೆಳೆಯಲ್ಲಿ ಪೊಟ್ಯಾಷ್ ಮತ್ತು ಸತುವಿನ ಕೊರತೆ ಕಂಡು ಬಂದಿದ್ದು, ಪ್ರತಿ ಎಕರೆಗೆ ಪೊಟ್ಯಾಷ್ 12.5 ಕೆ.ಜಿ ಮತ್ತು ಸತುವಿನ ಸಲ್ಪೆಟ್ 4.0 ಕೆ.ಜಿ ಗೊಬ್ಬರಗಳನ್ನು ಭೂಮಿಗೆ ಹಾಕುವುದರಿಂದ ಸತುವಿನ ಕೊರತೆ ನೀಗಿಸಬಹುದು.
ಜಿಲ್ಲೆಯ ಸಂಡೂರು ತಾಲ್ಲೂಕಿನ ದರೋಜಿ ಹಾಗೂ ಸುತ್ತಮುತ್ತ ಭಾಗಗಳಲ್ಲಿ ಬೆಳೆಯ ತೆನೆ ಹೊಡೆಯುವ ಹಂತದಲ್ಲಿ ಇದ್ದು, ದುಂಡಾಣು ಮಚ್ಚೆ ರೋಗ ನಿವಾರಣೆಗಾಗಿ ಕಾರ್ಬನ್‌ಡ್ಯೆಜಿಂ 1 ಗ್ರಾಂ ಮತ್ತು 0.5 ಗ್ರಾಂ ಸ್ಟೆಪ್ಟೋಸೈಕ್ಲಿನ್ ಪ್ರತಿ 1 ಲೀ. ನೀರಿಗೆ ಸೇರಿಸಿ ಸಿಂಪರಣೆ ಮಾಡಬೇಕು. ತಡವಾಗಿ ನಾಟಿ ಮಾಡಿರುವ ಬೆಳೆಗೆ ತೆನೆ ಹೊಡೆಯುವ ಮೊದಲು ಬೆಳೆಗೆ 2.5 ಗ್ರಾಂ. ತಾಮ್ರದ ಆಕ್ಸಿಕ್ಲೋರೈಡ್ ಮತ್ತು 0.5 ಗ್ರಾಂ. ಸ್ಟೆಪ್ಟೋಸೈಕ್ಲಿನ್ ಪ್ರತಿ 1 ಲೀ. ನೀರಿಗೆ ಬೆರಸಿ ಸಿಂಪರಣೆ ಮಾಡಬೇಕು ಎಂದು ಹೇಳಿದ್ದಾರೆ.
ಸಿಂಪರಣೆ ಆದ 2 ದಿನ ನಂತರ ಬೆಳೆಗೆ ಲಘು ಪೋಷಕಾಂಶಗಳಿಗೆ ಸಿಂಪರಣೆ ಮಾಡಿದಲ್ಲಿ ಬೆಳೆಯ ಬೆಳವಣಿಗೆ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರೋಗ ತೀವ್ರತೆಯಲ್ಲಿ 10 ದಿನಗಳ ಅಂತರದಲ್ಲಿ ಕನಿಷ್ಠ 2 ಸಲ ಸಿಂಪರಣೆ ಮಾಡುವುದು ಸೂಕ್ತ ಎಂದು ರೈತರಿಗೆ ಮಾಹಿತಿ ನೀಡಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 