ಚಾಂಪಿಯನ್ಸ್ ಲೀಗ್: ನಾಲ್ಕು ವರ್ಷಗಳ ಬಳಿಕ ಸೆಮಿಫೈನಲ್ ತಲುಪಿದ ಬಾರ್ಸಲೊನಾ
ಬಾರ್ಸಲೊನಾ , ಏ 17 ವಿಶ್ವ ಸ್ಟಾರ್ ಆಟಗಾರ ಲಿಯೊನೆಲ್ ಮೆಸ್ಸಿ ಗಳಿಸಿದ ಎರಡು ಗೋಲುಗಳ ನೆರವಿನಿಂದ ಬಾರ್ಸಲೊನಾ ತಂಡ, ಚಾಂಪಿಯನ್ಸ್ ಲೀಗ್ ಕ್ವಾರ್ಟರ್ ಫೈನಲ್ನಲ್ಲಿ ಮ್ಯಾಂಚೆಸ್ಟರ್ ಯುನೈಟೆಡ್ ವಿರುದ್ಧ ಜಯ ಸಾಧಿಸಿ ಸೆಮಿಫೈನಲ್ ತಲುಪಿತು. ಇದರೊಂದಿಗೆ ಬಾಸರ್ಿಲೋನಾ ಕಳೆದ ನಾಲ್ಕು ವರ್ಷಗಳಲ್ಲಿ ಮೊದಲ ಬಾರಿ ಚಾಂಪಿಯನ್ಸ್ ಲೀಗ್ನಲ್ಲಿ ಅಂತಿಮ ನಾಲ್ಕರ ಘಟಕ್ಕೆ ಪ್ರವೇಶಿಸಿದೆ.
ಇಲ್ಲಿನ ಕ್ಯಾಂಪ್ ನೌ ಅಂಗಳದಲ್ಲಿ ನಡೆದ ಪಂದ್ಯದಲ್ಲಿ 16ನೇ ಹಾಗೂ 20ನೇ ನಿಮಿಷದಲ್ಲಿ ಲಿಯೊನೆಲ್ ಮೆಸ್ಸಿ ಹಾಗೂ 61ನೇ ನಿಮಿಷದಲ್ಲಿ ಫಿಲಿಪ್ ಕೌಂಟಿನ್ಹೊ ಗಳಿಸಿದ ಗೋಲುಗಳ ಸಹಾಯದಿಂದ ಬಾರ್ಸಲೊನಾ 3-0 ಅಂತರದಲ್ಲಿ ಮ್ಯಾಂಚೆಸ್ಟರ್ ಯುನೈಟೆಡ್ ವಿರುದ್ಧ ಗೆಲುವಿನ ತೋರಣ ಕಟ್ಟಿತು.ಪಂದ್ಯದ ಆರಂಭದಿಂದಲೂ ಚೆಂಡಿನ ಮೇಲೆ ಉತ್ತಮ ಕಾಲ್ಚಳಕ ತೋರಿದ ಮೆಸ್ಸಿ, ಆರಂಭದಲ್ಲೇ ಬಾರ್ಸಲೊನಾ ಗೆ ಮುನ್ನಡೆ ತಂದುಕೊಟ್ಟರು. 16ನೇ ನಿಮಿಷದಲ್ಲಿ ಮೆಸ್ಸಿ ತಂಡಕ್ಕೆ ಗೋಲಿನ ಖಾತೆ ತೆರೆದರು. ಇದಾದ ಕೇವಲ ನಾಲ್ಕು ನಿಮಿಷಗಳ ಅಂತರದಲ್ಲಿ ಗೋಲು ಕೊಡುಗೆಯಾಗಿ ನೀಡಿದರು. ಇದರೊಂದಿಗೆ ಬಾರ್ಸಲೊನಾ ಮೊದಲ ಅವಧಿ ಮುಕ್ತಾಯಕ್ಕೆ 2-0 ಮುನ್ನಡೆ ಪಡೆಯಿತು.ತೀವ್ರ ಒತ್ತಡದಲ್ಲಿದ್ದ ಎದುರಾಳಿ ಮ್ಯಾಂಚೆಸ್ಟರ್ ಯುನೈಟೆಡ್ ತಂಡ ಎರಡನೇ ಅವಧಿಗೆ ಗೋಲು ಗಳಿಸಲು ಸನ್ನದ್ದರಾದರು. ಆದರೆ, ಬಾರ್ಸಲೊನಾ ತಂಡದ ರಕ್ಷಣಾ ಕೋಟೆ ಗೋಲು ಗಳಿಸಲು ಅವಕಾಶ ನೀಡಲಿಲ್ಲ. ಚೆಂಡಿನ ಮೇಲೆ ಹಿಡಿತ ಮುಂದುವರಿಸಿದ ಬಾಸರ್ಿಲೋನಾ 61ನೇ ನಿಮಿಷದಲ್ಲಿ ಮತ್ತೊಂದು ಗೋಲು ತನ್ನ ಖಾತೆಗೆ ಸೇರಿಸಿಕೊಂಡಿತು. ಫಿಲಿಪ್ ಕೌಂಟನ್ಹೊ ಗಳಿಸಿದ ಗೋಲಿನ ನೆರವಿನಿಂದ ಬಾಸರ್ಿ 3-0 ಮುನ್ನಡೆ ಪಡೆಯಿತು. ಅಂತಿಮವಾಗಿ ಬಾರ್ಸಲೊನಾ 3-0 ಅಂತರದಲ್ಲಿ ಜಯ ಸಾಧಿಸಿತು. ಆ ಮೂಲಕ ಕಳೆದ ನಾಲ್ಕು ವರ್ಷಗಳ ಬಳಿಕ ಬಾರ್ಸಲೊನಾ ಚಾಂಪಿಯನ್ಸ್ ಲೀಗ್ ಸೆಮಿಫೈನಲ್ಗೆ ಲಗ್ಗೆ ಇಟ್ಟಿತು. ಸೋಲಿನೊಂದಿಗೆ ಮ್ಯಾಂಚೆಸ್ಟರ್ ಯುನೈಟೆಡ್ ಟೂರ್ನಿಯಿಂದ ಹೊರ ನಡೆಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 