ಸೋಮಸಮುದ್ರದಲ್ಲಿ ಅಗರಬತ್ತಿ ತಯಾರಿಕೆ ಮೇಳ ಹಾಗೂ ಮಹಿಳಾ ಋತುಚಕ್ರ ಜಾಗೃತಿ ಕಾರ್ಯಕ್ರಮ
Agarbatti making fair and women's menstrual cycle awareness program in Somasamudra
ಬಳ್ಳಾರಿ 31: ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ 11 ದಿನಗಳ ಅಗರಬತ್ತಿ ತಯಾರಿಕಾ ತರಬೇತಿ ಪಡೆದ ಶಿಬಿರಾರ್ಥಿಗಳಿಂದ ಅಗರಬತ್ತಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಮಹಿಳಾ ಋತುಚಕ್ರ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಎನ್.ಆರ್.ಎಲ್.ಎಂ ಯೋಜನೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಸಂಸ್ಥೆಯ ಶ್ರೀ ಕೊಟ್ಟೂರೇಶ್ವರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕುರುಗೋಡು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ. ನಿರ್ಮಲ ಅವರು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸರ್ಕಾರದಿಂದ ದೊರೆಯುವ ವಿವಿಧ ಸಾಲ ಸೌಲಭ್ಯಗಳನ್ನು ಸಮರ್ಕವಾಗಿ ಬಳಸಿಕೊಳ್ಳುವಂತೆ ಮಹಿಳೆಯರಿಗೆ ಕರೆ ನೀಡಿದರು.ಅಗರಬತ್ತಿ ತರಬೇತಿ ಪಡೆದ ಮಹಿಳಾ ಶಿಬಿರಾರ್ಥಿಗಳು ತಯಾರಿಸಿದ ವಿವಿಧ ಮಾದರಿಯ ಅಗರಬತ್ತಿಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ವೀಕ್ಷಿಸಿದ ಅವರು, ಮಹಿಳೆಯರ ಕೌಶಲ್ಯ ಮತ್ತು ಪರಿಶ್ರಮವನ್ನು ಶ್ಲಾಘಿಸಿದರು.
ಅಲ್ಲದೆ, ಸ್ವತಃ ಅಗರಬತ್ತಿಗಳನ್ನು ಖರೀದಿಸುವ ಮೂಲಕ ಮಹಿಳೆಯರನ್ನು ಪ್ರೋತ್ಸಾಹಿಸಿದರು.ಸ್ವಸಹಾಯ ಸಂಘಗಳ ಮಹಿಳೆಯರು ಕೇವಲ ತರಬೇತಿಗೆ ಸೀಮಿತವಾಗದೆ, ಎನ್.ಆರ್.ಎಲ್.ಎಂ ಯೋಜನೆಯಡಿ ದೊರೆಯುವ ಸಾಲ ಸೌಲಭ್ಯಗಳು ಹಾಗೂ ಎಂ.ಪಿ.ಇ.ಜಿ.ಪಿ ಯೋಜನೆಯಡಿ ಸಾಲ ಪಡೆದು ಸ್ವಂತ ಅಗರಬತ್ತಿ ಉದ್ಯಮ ಆರಂಭಿಸಿ ಯಶಸ್ವಿ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಅವರು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಮಹಿಳಾ ಋತುಚಕ್ರ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲಾಯಿತು. ಋತುಚಕ್ರದ ಸಮಯದಲ್ಲಿ ಮಹಿಳೆಯರು ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಳಸಿದ ಸ್ಯಾನಿಟರಿ ಪ್ಯಾಡ್ಗಳನ್ನು ಎಲ್ಲೆಂದರಲ್ಲಿ ಬಿಸಾಡದೆ, ಸ್ವಚ್ಛತಾ ವಾಹನಗಳಿಗೆ ನೀಡಬೇಕು ಅಥವಾ ಶಾಲಾ ಮಟ್ಟದಲ್ಲಿ ಅಳವಡಿಸಿರುವ ಇನ್ಸಿನೆರೇಟರ್ (ಬರ್ನಿಂಗ್ ಮಷಿನ್) ಮೂಲಕ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ತಿಳಿಸಲಾಯಿತು.ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಗೋವಿಂದಪ್ಪ, ಉಪನ್ಯಾಸಕ ದಿನೇಶ್, ಕರವಸೂಲಿಗಾರ ಹೊನ್ನೂರಸ್ವಾಮಿ, ಹೆಚ್. ಅಡಿವೆಪ್ಪ, ಆಶಾ ಕಾರ್ಯಕರ್ತೆಯರು ಹಾಗೂ ತರಬೇತಿ ಪಡೆದ ಮಹಿಳಾ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ಮಹಿಳೆಯರ ಸ್ವಾವಲಂಬನೆ, ಉದ್ಯಮಶೀಲತೆ ಮತ್ತು ಆರೋಗ್ಯ ಜಾಗೃತಿ ಕುರಿತು ಮಹತ್ವದ ಸಂದೇಶ ಸಾರಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 