ಅಗ್ನಿವೀರ ನೇಮಕಾತಿ ರ್ಯಾಲಿ: ಪೂರ್ವಸಿದ್ಧತೆ ಪರೀಶೀಲಿಸಿದ ಜಿಲ್ಲಾಧಿಕಾರಿ
Agniveer Recruitment Rally: Deputy Commissioner reviews preparations
ಲೋಕದರ್ಶನ ವರದಿ
ವಿಜಯಪುರ, ಸೆ. 7: ಭಾರತೀಯ ಸೇನೆಯ ಅಗ್ನಿವೀರ ನೇಮಕಾತಿ ರ್ಯಾಲಿ ಸೆಪ್ಟೆಂಬರ್ 10ರಿಂದ 23ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೋಮವಾರ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರೀಶೀಲಿಸಿದರು.
ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಆಗಮಿಸುವ ನೀರೀಕ್ಷೆಯಿರುವ ಹಿನ್ನೆಲೆಯಲ್ಲಿ, ಅವರಿಗೆ ಅಗತ್ಯ ಮೂಲಸೌಕರ್ಯ ಹಾಗೂ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕ್ರೀಡಾಂಗಣದಲ್ಲಿ ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್, ಬೆಳಕು ಹಾಗೂ ಶೌಚಾಲಯ ವ್ಯವಸ್ಥೆ ಸಮರ್ಕವಾಗಿರಬೇಕು ಎಂದು ನಿರ್ದೇಶನ ನೀಡಿದರು.
ಅಭ್ಯರ್ಥಿಗಳಿಗಾಗಿ ಕ್ರೀಡಾಂಗಣದಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್ ವ್ಯವಸ್ಥೆ ಸಿದ್ಧವಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚಿಸಿದರು. ವಸತಿ, ಊಟ ಹಾಗೂ ಇತರೆ ಅಗತ್ಯ ಸೌಲಭ್ಯಗಳನ್ನು ಸಮರ್ಕವಾಗಿ ಒದಗಿಸುವಂತೆ ತಿಳಿಸಿದರು.
ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಅಭ್ಯರ್ಥಿಗಳಿಗೆ ಸ್ಪಷ್ಟ ಮಾಹಿತಿ ದೊರೆಯುವಂತೆ ಮಾಹಿತಿ ಫಲಕ, ಮಾರ್ಗದರ್ಶನ ಮತ್ತು ಸೂಚನಾ ಫಲಕಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶೈಕ್ಷಣಿಕ ಹಾಗೂ ಇತರೆ ದಾಖಲೆಗಳ ಪರೀಶೀಲನೆಯನ್ನು ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಸುವಂತೆ ಶಿಕ್ಷಣ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಭ್ಯರ್ಥಿಗಳು, ಅವರ ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಕ್ರೀಡಾಂಗಣದ ಸುತ್ತ ಸಂಚಾರ ಮತ್ತು ಜನದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ನೇಮಕಾತಿ ಪ್ರಕ್ರಿಯೆ ಯಾವುದೇ ಅಡಚಣೆಯಿಲ್ಲದೆ ಪಾರದರ್ಶಕವಾಗಿ ಮತ್ತು ಸುಗಮವಾಗಿ ನಡೆಯಲು ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಸೇನಾ ನೇಮಕಾತಿ ಕಚೇರಿಯ ನಿರ್ದೇಶಕ ಕರ್ನಲ್ ಜಿ. ಸೋಮರಾಜನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸೇನಾ ನೇಮಕಾತಿ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 