ಗದಗ

ಕೃಷಿ ಮೌಲ್ಯವರ್ಧನೆ, ಮಾರುಕಟ್ಟೆ ಜಾಲ ವಿಸ್ತರಣೆ ಇಂದಿನ ಅಗತ್ಯ: ಈಶ್ವರ ಖಂಡ್ರೆ**ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು; ರೈತರು ಉತ್ಪಾದನೆಯಿಂದ ರಫ್ತಿನವರೆಗೆ ಪಾಲುದಾರರಾಗಲಿ

ಕೃಷಿ ಮೌಲ್ಯವರ್ಧನೆ, ಮಾರುಕಟ್ಟೆ ಜಾಲ ವಿಸ್ತರಣೆ ಇಂದಿನ ಅಗತ್ಯ: ಈಶ್ವರ ಖಂಡ್ರೆ**ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು; ರೈತರು ಉತ್ಪಾದನೆಯಿಂದ ರಫ್ತಿನವರೆಗೆ ಪಾಲುದಾರರಾಗಲಿ
Agricultural Value Addition and Expansion of Market Networks Are the Need of the Hour: Eshwar Khand

 

             ಗದಗ  22: ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಲಕ್ಷಾಂತರ ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿದೆ. ದೇಶದ 140 ಕೋಟಿ ಜನರಿಗೆ ಆಹಾರ ಭದ್ರತೆ ಒದಗಿಸುವ ಮಹತ್ವದ ಕ್ಷೇತ್ರವಾಗಿರುವ ಕೃಷಿಯಲ್ಲಿ, ಇನ್ನು ಮುಂದೆ ಉತ್ಪಾದನೆ ಹೆಚ್ಚಿಸುವುದರ ಜತೆಗೆ ಮೌಲ್ಯವರ್ಧನೆ, ಮಾರುಕಟ್ಟೆ ವಿಸ್ತರಣೆ ಹಾಗೂ ಆಹಾರ ಸಂಸ್ಕರಣೆಗೆ ಆದ್ಯತೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಈಶ್ವರ ಬಿ. ಖಂಡ್ರೆ ಹೇಳಿದರು.

           ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ (ಕಿಲ್ಪಾರ್) ಸಂಯುಕ್ತ ಆಶ್ರಯದಲ್ಲಿ ಶನಿವಾರ ಗ್ರಾಮ ಗಂಗೋತ್ರಿ ಆವರಣದ ಕೌಶಲ ವಿಕಾಸ ಭವನದಲ್ಲಿ ಆಯೋಜಿಸಿದ್ದ ‘ಕೃಷಿ ಉದ್ಯಮ ಮತ್ತು ಆಹಾರ ಸಂಸ್ಕರಣೆಯ ಕಾನೂನು ವ್ಯವಸ್ಥೆ: ದೃಷ್ಟಿಕೋನಗಳು ಮತ್ತು ಸವಾಲುಗಳು’ ವಿಷಯದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

          ಒಂದು ಕಾಲದಲ್ಲಿ ಆಹಾರದ ಕೊರತೆ ಎದುರಿಸುತ್ತಿದ್ದ ಭಾರತ, ಇಂದು ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಇದಕ್ಕೆ ಹಿಂದಿನ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆದ ಹಸಿರು ಕ್ರಾಂತಿ ಪ್ರಮುಖ ಕಾರಣವಾಗಿದೆ. ಈಗ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಸಂಘಟಿತ ಮಾರುಕಟ್ಟೆ, ತಂತ್ರಜ್ಞಾನ ಮತ್ತು ಉದ್ಯಮಶೀಲತೆಯ ಮೂಲಕ ರೈತರ ಆದಾಯ ಹೆಚ್ಚಿಸುವತ್ತ ಗಮನ ಹರಿಸಬೇಕಿದೆ ಎಂದರು.*ಕೃಷಿ ವೆಚ್ಚ ತಗ್ಗಿಸಲು ಸಂಶೋಧನೆ ಅಗತ್ಯ:*ನೆಲ ಉಳುಮೆಯಿಂದ ಬಿತ್ತನೆ, ಬೆಳೆ ಪೋಷಣೆ ಹಾಗೂ ಕೊಯ್ಲಿನವರೆಗೆ ಎಲ್ಲ ಹಂತಗಳಲ್ಲಿಯೂ ಕೃಷಿ ವೆಚ್ಚ ಕಡಿಮೆ ಮಾಡುವ ಬಗ್ಗೆ ಸಂಶೋಧಕರು ಮತ್ತು ಕೃಷಿ ವಿಜ್ಞಾನಿಗಳು ಗಮನ ಹರಿಸಬೇಕು. 


ಸುದ್ದಿ ಓದಿ