ರೈಬಾಗದಲ್ಲಿ ರಸಗೊಬ್ಬರ ಅಂಗಡಿಗಳ ಮೇಲೆ ಕೃಷಿ ಇಲಾಖೆ ಪರೀಶೀಲನೆ
Agriculture Department inspects fertilizer shops in Raibag
ರಾಯಬಾಗ 30 : ರಾಯಬಾಗ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಶುರುವಾಗಿದ್ದು, ಮಾರಾಟಗಾರರು ರೈತರಿಗೆ ರಸಗೊಬ್ಬರಗಳನ್ನು ನಿಗದಿತ ಬೆಲೆಯಲ್ಲಿ ಮಾರಾಟ ಮಾಡಬೇಕೆಂದು ರಾಯಬಾಗ ಸಹಾಯಕ ಕೃಷಿ ನಿರ್ದೇಶಕ ವಿನೋದ ಮಾವರಕರ ತಿಳಿಸಿದ್ದಾರೆ. ಗುರುವಾರ ತಾಲೂಕಿನ ವಿವಿಧ ರಸಗೊಬ್ಬರ ಮಳಿಗೆಗಳಿಗೆ ಭೇಟಿ ನೀಡಿ, ಪರೀವೀಕ್ಷಿಸಿ ರಸಗೊಬ್ಬರ ಭೌತಿಕ ದಾಸ್ತಾನು ಪರೀಶೀಲಿಸಿದರು. ಯೂರಿಯಾ ಹಾಗೂ ಇನ್ನಿತರ ರಸಗೊಬ್ಬರಗಳನ್ನು ನಿಗದಿತ ಮಾರಾಟ ಬೆಲೆಗಿಂತ ಹೆಚ್ಚಿನ ದರವನ್ನು ಪಡೆಯುತ್ತಿರುವ ಬಗ್ಗೆ ರೈತರಿಂದ ದೂರುಗಳು ಬರುತ್ತಿದ್ದು, ಮಾರಾಟಗಾರರು ಸರಕಾರ ನಿಗದಿಪಡಿಸಿದ ಎಮ್.ಆರಿ್ಪ ದರದಲ್ಲಿ ಮಾರಾಟ ಮಾಡಬೇಕು.
ಕೃಷಿ ಇಲಾಖೆ ಅಧಿಕಾರಿಗಳು ಈಗಾಗಲೇ ರಸಗೊಬ್ಬರ ಪರವಾನಿಗೆದಾರರಿಗೆ ಕಾರಣ ಕೇಳಿ ನೋಟಿಸ್ ಹಾಗೂ ಮಾರಾಟ ತಡೆ ಆಜ್ಞೆ ನೋಟಿಸ್ ಜಾರಿ ಮಾಡಿರುತ್ತಾರೆ. ಈಗಾಗಲೇ ತಾಲೂಕಿನ ಎಲ್ಲ ರಸಗೊಬ್ಬರ, ಬೀಜ ಹಾಗು ಕೀಟನಾಶಕಗಳ ಮಾರಾಟ ಮಳಿಗೆಗಳಲ್ಲಿ ಇಲಾಖೆಯ ಪ್ರಕಟಣೆ ಇದ್ದು, ಮಾರಾಟದ ಬಗ್ಗೆ ದೂರುಗಳಿದ್ದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿರುತ್ತಾರೆ. ಮಳಿಗೆದಾರರು ಕಾನೂನಿನ ಚೌಕಟ್ಟನ್ನು ಮೀರಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕರು ಎಚ್ಚರಿಸಿದ್ದಾರೆ.
ರಾಯಬಾಗ ತಾಲೂಕಿನ ಭೆಂಡವಾಡ ಗ್ರಾಮದ ರಸಗೊಬ್ಬರ ಮಾರಾಟ ಮಳಿಗೆಗೆ ಸಹಾಯಕ ಕೃಷಿ ನಿರ್ದೇಶಕ ವಿನೋದ ಮಾವರಕರ ಭೇಟಿ ನೀಡಿ, ಪರೀವೀಕ್ಷಣೆ ನಡೆಸಿದರು. ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಶುರುವಾಗಿದ್ದು, ಮಾರಾಟಗಾರರು ರೈತರಿಗೆ ರಸಗೊಬ್ಬರಗಳನ್ನು ನಿಗದಿತ ಬೆಲೆಯಲ್ಲಿ ಮಾರಾಟ ಮಾಡಬೇಕೆಂದು ರಾಯಬಾಗ ಸಹಾಯಕ ಕೃಷಿ ನಿರ್ದೇಶಕ ವಿನೋದ ಮಾವರಕರ ತಿಳಿಸಿದ್ದಾರೆ. ಗುರುವಾರ ತಾಲೂಕಿನ ವಿವಿಧ ರಸಗೊಬ್ಬರ ಮಳಿಗೆಗಳಿಗೆ ಭೇಟಿ ನೀಡಿ, ಪರೀವೀಕ್ಷಿಸಿ ರಸಗೊಬ್ಬರ ಭೌತಿಕ ದಾಸ್ತಾನು ಪರೀಶೀಲಿಸಿದರು.
ಯೂರಿಯಾ ಹಾಗೂ ಇನ್ನಿತರ ರಸಗೊಬ್ಬರಗಳನ್ನು ನಿಗದಿತ ಮಾರಾಟ ಬೆಲೆಗಿಂತ ಹೆಚ್ಚಿನ ದರವನ್ನು ಪಡೆಯುತ್ತಿರುವ ಬಗ್ಗೆ ರೈತರಿಂದ ದೂರುಗಳು ಬರುತ್ತಿದ್ದು, ಮಾರಾಟಗಾರರು ಸರಕಾರ ನಿಗದಿಪಡಿಸಿದ ಎಮ್.ಆರಿ್ಪ ದರದಲ್ಲಿ ಮಾರಾಟ ಮಾಡಬೇಕು. ಕೃಷಿ ಇಲಾಖೆ ಅಧಿಕಾರಿಗಳು ಈಗಾಗಲೇ ರಸಗೊಬ್ಬರ ಪರವಾನಿಗೆದಾರರಿಗೆ ಕಾರಣ ಕೇಳಿ ನೋಟಿಸ್ ಹಾಗೂ ಮಾರಾಟ ತಡೆ ಆಜ್ಞೆ ನೋಟಿಸ್ ಜಾರಿ ಮಾಡಿರುತ್ತಾರೆ. ಈಗಾಗಲೇ ತಾಲೂಕಿನ ಎಲ್ಲ ರಸಗೊಬ್ಬರ, ಬೀಜ ಹಾಗು ಕೀಟನಾಶಕಗಳ ಮಾರಾಟ ಮಳಿಗೆಗಳಲ್ಲಿ ಇಲಾಖೆಯ ಪ್ರಕಟಣೆ ಇದ್ದು,
ಮಾರಾಟದ ಬಗ್ಗೆ ದೂರುಗಳಿದ್ದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿರುತ್ತಾರೆ. ಮಳಿಗೆದಾರರು ಕಾನೂನಿನ ಚೌಕಟ್ಟನ್ನು ಮೀರಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕರು ಎಚ್ಚರಿಸಿದ್ದಾರೆ. ರಾಯಬಾಗ ತಾಲೂಕಿನ ಭೆಂಡವಾಡ ಗ್ರಾಮದ ರಸಗೊಬ್ಬರ ಮಾರಾಟ ಮಳಿಗೆಗೆ ಸಹಾಯಕ ಕೃಷಿ ನಿರ್ದೇಶಕ ವಿನೋದ ಮಾವರಕರ ಭೇಟಿ ನೀಡಿ, ಪರೀವೀಕ್ಷಣೆ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 