ನ. 08 ರಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಳ್ಳಾರಿಗೆ
Agriculture Minister N. Chaluvarayaswamy to Ballari on Nov. 08
ಬಳ್ಳಾರಿ 06: ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನವೆಂಬರ್ 08 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ 10 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟ್ರಿಪ್ ಗೆ ಆಗಮಿಸುವರು.
ಅಲ್ಲಿಂದ ಬೆಳಿಗ್ಗೆ 10.15 ಕ್ಕೆ ಹೊರಟು, ಬೆಳಿಗ್ಗೆ 11 ಗಂಟೆಗೆ ಕೃಷಿ ಇಲಾಖೆ ವತಿಯಿಂದ ಬಳ್ಳಾರಿ ನಗರದ ಹಳೆಯ ತಾಲ್ಲೂಕು ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕೃಷಿಕ ಸಮಾಜ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 12 ಗಂಟೆಗೆ ಬಳ್ಳಾರಿಯಿಂದ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟ್ರಿಪ್ ಗೆ ಆಗಮಿಸಿ, ನಂತರ ಮಧ್ಯಾಹ್ನ 01 ಗಂಟೆಗೆ ವಿಶೇಷ ವಿಮಾನದ ಮೂಲಕ ಕಲಬುರಗಿ ಜಿಲ್ಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 