ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರಕ್ಕೆ ಕೃಷಿ ಸಚಿವರ ಭೇಟಿ
ಲೋಕದರ್ಶನ ವರದಿ
ಮತ್ತಿಕೊಪ್ಪ 22: ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರಕ್ಕೆ ಕರ್ನಾಟಕ ಸರ್ಕಾರದ ಮಾನ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ಭೇಟಿ ನೀಡಿ, ಕೇಂದ್ರದ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಯಡಿ ಸ್ಥಾಪಿಸಿದ ಒಂದು ಕಣ್ಣಿನ ಕಬ್ಬು ಸಸಿಗಳನ್ನು ತಯಾರಿಸುವ “ನೇಚರ್ ನರ್ಸರಿ” ಯನ್ನು ಉದ್ಘಾಟಿಸಿದರು.
ಕೃಷಿ ವಿಜ್ಞಾನ ಕೇಂದ್ರದ ಅಧ್ಯಕ್ಷರಾದ. ಬಿ.ಆರ್. ಪಾಟೀಲ ರವರು ಸಚಿವರನ್ನು ಸ್ವಾಗತಿಸಿ ಕೇಂದ್ರದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಹನಿ ನೀರಾವರಿ ಪದ್ಧತಿ, ಪ್ರಯೋಗಾಲಯ, ರೈತ ಭವನ ಹಾಗೂ ಬೀಜ ಘಟಕ, ಜೈವಿಕ ಗೊಬ್ಬರ, ಜೈವಿಕ ಪೀಡೆನಾಶಕಗಳ ಕುರಿತು ವಿವರಿಸಿದರು. ವಿವಿಧ ಕಬ್ಬು ತಳಿಗಳ ಬೆಳವಣಿಗೆ ಹಾಗೂ ಇಳುವರಿ ಸಾಮರ್ಥ್ಯದ ಕುರಿತಾದ ಗುಣ ಲಕ್ಷಣಗಳ ಕುರಿತು ಮಾನ್ಯ ಸಚಿವರು ಮಾಹಿತಿ ಪಡೆದರು.
ಅದರಂತೆ ಹಿಂಗಾರು ಬೆಳೆಗಳಾದ ಗೋದಿ, ಕಡಲೆ, ಸೂರ್ಯಕಾಂತಿ, ಹಿಂಗಾರು ಜೋಳ, ಚೆನ್ನಂಗಿ ಕುಸುಬೆ ಹಾಗೂ ಚಿಯಾ ಬೆಳೆಗಳ ವಿವಿಧ ತಳಿಗಳ ಬೆಳೆ ಪ್ರಾತ್ಯಕ್ಷಿಕೆ ತಾಕುಗಳನ್ನು ವೀಕ್ಷಿಸಿ ವಿಜ್ಞಾನಿಗಳಿಂದ ತಳಿಗಳ ಗುಣಲಕ್ಷಣಗಳನ್ನು ಅರಿತುಕೊಂಡರು. ಇದೇ ಸಂದರ್ಭದಲ್ಲಿ, ಜಿಲ್ಲೆಯ ಅರೆ ಕೃಷಿ ವಿಸ್ತರಣಾ ಕಾರ್ಯಕರ್ತೆಯರಾದ ಕೃಷಿ ಸಖಿಯರೊಂದಿಗೆ ಚರ್ಚಿಸಿ ಅವರ ಕಾರ್ಯ ವೈಖರಿಯ ಬಗ್ಗೆ ತಿಳಿದುಕೊಂಡರು. ಭೇಟಿ ನಂತರ ಮಾತನಾಡಿದ ಸಚಿವರು, ಈ ಭಾಗದಲ್ಲಿ ಕೃಷಿ ವಿಜ್ಞಾನ ಕೇಂದ್ರವು ರೈತರಿಗೆ ಉತ್ತಮ ಸೇವೆ ಸಲ್ಲಿಸುತ್ತಿದೆ, ಇಲ್ಲಿ ಕೈಗೊಂಡ ಪ್ರಾತ್ಯಕ್ಷಿಕೆ ಘಟಕಗಳು ರೈತರಿಗೆ ಮಾದರಿಯಾಗಿವೆ. ಈ ನಿಟ್ಟಿನಲ್ಲಿ ಕೇಂದ್ರದ ಸ್ಥಾಪನೆಗೆ ಆಸಕ್ತಿ ತೋರಿದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರನ್ನು ಅಭಿನಂದಿಸಿದರು ಹಾಗೂ ವಿಜ್ಞಾನಿಗಳ ಪ್ರಯತ್ನಕ್ಕೆ ಶುಭ ಕೋರಿದರು. ಕಬ್ಬು ಸಸಿ ತಯಾರಿಸುವ ನರ್ಸರಿಯು ಪ್ರಾರಂಭವಾದ ಎರಡು ತಿಂಗಳುಗಳಲ್ಲಿ ಕಬ್ಬು ಬೆಳೆಯ ವಿವಿಧ ತಳಿಗಳ ಒಂದು ಕಣ್ಣಿನ ಮೂರು ಲಕ್ಷ ಸಸಿಗಳನ್ನು ತಯಾರಿಸಿ ರೈತರಿಗೆ ಪೂರೈಸಿದ್ದು ಗಮನಾರ್ಹವಾಗಿದೆ.
ಭೇಟಿ ಸಂದರ್ಭದಲ್ಲಿ ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ, ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಡಾ. ವ್ಹಿ. ಆಯ್. ಪಾಟೀಲ, ಕರ್ನಾಟಕ ಸರ್ಕಾರದ ಕೃಷಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳಾದ ಡಾ. ಎ. ಬಿ. ಪಾಟೀಲ ಹಾಗೂ ಬೆಳಗಾವಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಹೆಚ್. ಡಿ. ಕೋಳೇಕರ, ಬೈಲಹೊಂಗಲ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಬಸವರಾಜ ದಳವಾಯಿ, ಕೃಷಿ ಅಧಿಕಾರಿ ಆರ್. ಐ. ಕುಂಬಾರ, ಉಪಸ್ಥಿತರಿದ್ದರು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಮಂಜುನಾಥ ಚೌರಡ್ಡಿ ಹಾಗೂ ವಿಜ್ಞಾನಿಗಳಾದ ಡಾ. ಎಸ್. ಎಸ್. ಹಿರೇಮಠ, ಎಸ್. ಎಮ್. ವಾರದ, ಜಿ. ಬಿ. ವಿಶ್ವನಾಥ, ಪ್ರವೀಣ ಯಡಹಳ್ಳಿ, ಡಾ. ಭಾವಿನಿ ಪಾಟೀಲ, ಡಾ. ಗುರುರಾಜ ಕೌಜಲಗಿ, ಶಂಕರಗೌಡ ಪಾಟೀಲ ಕೇಂದ್ರದ ಚಟುವಟಿಕೆಗಳ ಕುರಿತು ಹಾಗೂ ರೈತರಿಗೆ ಒದಗಿಸುವ ವಿವಿಧ ಸೇವೆಗಳ ಕುರಿತು ಮಾಹಿತಿ ನೀಡಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 