ರಾಣೆಬೆನ್ನೂರ

ಸಿದ್ದರಾಮಯ್ಯನವರ ತೇಜೋವಧೆಗೆ ಅಹಿಂದ ಸಂಘಟನೆಗಳ ಪ್ರತಿಭಟನೆ

ಸಿದ್ದರಾಮಯ್ಯನವರ ತೇಜೋವಧೆಗೆ ಅಹಿಂದ ಸಂಘಟನೆಗಳ ಪ್ರತಿಭಟನೆ

ರಾಣಿಬೆನ್ನೂರು 24 : ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆಗೆ ರಾಜ್ಯಪಾಲರು ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿರುವುದನ್ನು ಖಂಡಿಸಿ, ರಾಣಿಬೆನ್ನೂರಿನ ಅಹಿಂದ ಸಂಘಟನೆಗಳ ಕಾರ್ಯಕರ್ತರು ಆಗಸ್ಟ್‌ 26 ರಂದು ಸೋಮವಾರ ಬೆಳಗ್ಗೆ 10.30 ಗಂಟೆಗೆ ನಗರದ  ಬಸ್ ನಿಲ್ದಾಣದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಮುಖಂಡ ರತ್ನಾಕರ ಕುಂದಾಪುರ ತಿಳಿಸಿದರು. 

ನಗರದ ಶ್ರೀಗಂಗಾ ವಿವಿಧ ಉದ್ಧೇಶಗಳ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ಶುಕ್ರವಾರ ಏರಿ​‍್ಡಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30 ಗಂಟೆಗೆ ಇಲ್ಲಿನ ಪಿಬಿ ರಸ್ತೆಯ ಕೆಇಬಿ ಗಣೇಶ ದೇವಸ್ಥಾನದಿಂದ ಸಾವಿರಾರು ಅಹಿಂದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯ ಮೂಲಕ ಸಂಚರಿಸಿ ನಗರದ  ಬಸ್ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.  

ಕೊರವ, ವಾಲ್ಮಿಕಿ, ಬಂಜಾರ, ಸುಣಗಾರ, ಉಪ್ಪಾರ, ಮಾದರ, ಛಲವಾದಿ, ಕೊರಚ, ಭೋವಿ, ಕುರಬ, ಕಂಕುಮಗಾರ ಸೇರಿಂದತೆ ಎಲ್ಲ ಹಿಂದುಳಿದ ಸಮಾಜಗಳ ಅಹಿಂದ ಮುಖಂಡರು ಮತ್ತು ಕಾರ್ಯಕರ್ತರು ಗೋಬ್ಯಾಕ್ ರಾಜ್ಯಪಾಲರೆ ಚಳುವಳಿಯ ಮೂಲಕ ಒತ್ತಾಯಿಸಲಾಗುವುದು ಎಂದರು.  

ರಾಜ್ಯದಲ್ಲಿ ಜನಪ್ರಿಯ ನಾಯಕ ಹಾಗೂ ಅಹಿಂದ ವರ್ಗದ ಆಶಾಕಿರಣವಾಗಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವ ಕುತಂತ್ರ ಮಾಡುತ್ತಿರುವ ರಾಜ್ಯಪಾಲರು ರಾಜ್ಯದಿಂದ ಮೊದಲು ತೊಲಗಬೇಕು. ನಿವೇಶನಗಳ ಹಂಚಿಕೆಯನ್ನು ರೂಪಿಸಿದ್ದು ಹಿಂದಿನ ಬಿಜೆಪಿ ಸರ್ಕಾರವೇ ಆಗಿದೆ. ಸಿದ್ದರಾಮಯ್ಯ ಪತ್ನಿಯ ಸಹೋದರ ತಮ್ಮ ಸಹೋದರಿಗೆ ಅರಿಷಿಣ ಕುಂಕುಮ ರೂಪದಲ್ಲಿ ಆಸ್ತಿ ಕೊಟ್ಟಿದ್ದಾರೆ. ಅದನ್ನು ಸರಿಯಾಗಿ ಅರ್ಥೈಸಿಕೊಳ್ಳದ ರಾಜ್ಯಪಾಲರು ಇದೀಗ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಸಮಂಜಸವೇ ಎಂದು ಪ್ರಶ್ನಿಸಿದರು. 

ಇದು ಅತ್ಯಂತ ಖಂಡನೀಯವಾಗಿದೆ. ಮುಡಾ ವಿಷಯದಲ್ಲಿ ಅನಗತ್ಯವಾಗಿ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಹಾಗೇ ನೋಡಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಕಷ್ಟು ಹಗರಣಗಳಾಗಿವೆ. ಅದನ್ನು ಕೈಬಿಟ್ಟು ಸಿಎಂ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕರ್ನಾಟಕದ ಜನಪ್ರಿಯ ರಾಜಕಾರಣಿಯಾಗಿದ್ದಾರೆ. ಇದನ್ನು ಸಹಿಸದ ಬಿಜೆಪಿಗರು ದೆಹಲಿ ಸಿಎಂ ಅರವಿಂದ ಕ್ರೇಜಿವಾಲ್, ಜಾಖಂಡ್ ಸಿಎಂ ಹೇಮಂತ್ ಸೋರೆನ್ ರೀತಿ ಜೈಲಿಗೆ ಕಳುಹಿಸಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.  

ಮುಡಾ ವಿಷಯದಲ್ಲಿ ಅನಗತ್ಯವಾಗಿ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಲು ಬಲೆ ಹೆಣೆಯುತ್ತಿದ್ದಾರೆ. ಹಾಗೇ ನೋಡಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಕಷ್ಟು ಹಗರಣಗಳಾಗಿವೆ. ಅದನ್ನು ಕೈಬಿಟ್ಟು ಸಿಎಂ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದನ್ನು ಇದೇ ರೀತಿ ಮುಂದುವರೆಸಿದಲ್ಲಿ ಅಹಿಂದ ವರ್ಗಗಳ ಜತೆಗೂಡಿ ರಾಜ್ಯಾದ್ಯಂತ ರಾಜ್ಯ ಬಿಟ್ಟು ತೊಲಗುವವರಗೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.  

ಸುದ್ದಿಗೋಷ್ಠಿಯಲ್ಲಿ ರಾಮಣ್ಣ ನಾಯಕ, ಕೃಷ್ಣಮೂರ್ತಿ ಸುಣಗಾರ, ಷಣ್ಮುಖಪ್ಪ ಬಂಬಳಿ, ಮೃತ್ಯುಂಜಯ ಗುದಿಗೇರ, ಮಲ್ಲೇಶಪ್ಪ ಮದ್ಲೇರ, ಸುರೇಶ ಜಾಡಮಾಲಿ, ಶೇರು ಕಾಬೂಲಿ, ಸಿದ್ದಪ್ಪ ಅಂಬಲಿ, ಆನಂದ ಹುಲ್ಬನ್ನಿ, ದುರಗಪ್ಪ ಕೊರಚರ, ಟಿ.ಕೆ. ಲಮಾಣಿ, ಅಶೋಕ ಟಿಕಾರೆ, ಬಸವರಾಜ ಉಪ್ಪಾರ, ಹನುಮಂತಪ್ಪ ಕಬ್ಬಾರ, ಗೋಪಿ ಕುಂದಾಪುರ ಸೇರಿದಂತೆ ಮತ್ತಿತರರು ಇದ್ದರು. 


ಸುದ್ದಿ ಓದಿ