ಉತ್ತಮ ಕಾರ್ಯಕ್ಕೆ ಅಹಿರಸಂಗದ ಸಹಕಾರ ಸಂಘಕ್ಕೆ ಪ್ರಶಸ್ತಿ
Ahirasanga Cooperative Society receives award for excellent work.
ಉತ್ತಮ ಕಾರ್ಯಕ್ಕೆ ಅಹಿರಸಂಗದ ಸಹಕಾರ ಸಂಘಕ್ಕೆ ಪ್ರಶಸ್ತಿ
ಇಂಡಿ 13: ಸನ್ 2024ಹಿ25 ಸಾಲಿನ ಉತ್ತಮ ಕಾರ್ಯನಿರ್ವಹಣೆಗಾಗಿ ತಾಲೂಕಿನ ಅಹಿರಸಂಗ ಗ್ರಾಮದ ಭೂದೇವಿ ಕಬ್ಬು ಬೆಳೆಗಾರರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ 10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಶನಿವಾರ ವಿಜಯಪುರದ ಬಿಡಿಸಿಸಿ ಬ್ಯಾಂಕ್ ಆವರಣದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ ಹಾಗೂ ವ್ಯವಸ್ಥಾಪಕ ರಮೇಶ ಬಿರಾದಾರ ಅವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಶಿವಾನಂದ ಪಾಟೀಲ, ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಸೇರಿದಂತೆ ಬಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 