ಬಳ್ಳಾರಿ

ಎಲ್ಲಾ ನಿರುದ್ಯೋಗಿಗಳಿಗೂ ನಿರುದ್ಯೋಗ ಭತ್ಯೆ ನೀಡಲು ಎಐಡಿವೈಓ ಒತ್ತಾಯ

ಎಲ್ಲಾ ನಿರುದ್ಯೋಗಿಗಳಿಗೂ ನಿರುದ್ಯೋಗ ಭತ್ಯೆ ನೀಡಲು ಎಐಡಿವೈಓ ಒತ್ತಾಯ

ಬಳ್ಳಾರಿ 23: ಕಾಂಗ್ರೆಸ್ ಪಕ್ಷವು ತಾನು ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಎಲ್ಲಾ ನಿರುದ್ಯೋಗಗಳಿಗೂ ನಿರುದ್ಯೋಗ ಭತ್ಯ ನೀಡಲು ಎಐಡಿವೈಓ  ಆಗ್ರಹಿಸಿದೆ. ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಜಗದೀಶ್ ನೇಮಕಲ್ಲು ಸರ್ಕಾರದ ಷರತ್ತನ್ನು  ವಿರೋಧಿಸಿರುತ್ತಾರೆ.  

ಪದವಿ ಮತ್ತು ಡಿಪ್ಲೋಮಾ ಮುಗಿಸಿರುವ ನಿರುದ್ಯೋಗ ಯುವಕರಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ನೀಡುವ ಇವರಿಗೆ ಯೋಜನೆ ಪ್ರಕಾರ 2022 23ನೇ ಶೈಕ್ಷಣಿಕ ವರ್ಷದಲ್ಲಿ ತೆರ್ಗಡೆಯಾದ ಅಭ್ಯರ್ಥಿಗಳಿಗೆ ಮಾತ್ರ ನಿರುದ್ಯೋಗ ಬರುತ್ತದೆ, ಅದು ಎರಡು ವರ್ಷಗಳ ಅವಧಿಗೆ ಮಾತ್ರ ನೀಡಲಾಗುವುದು ಎಂಬ ಷರತ್ತು ವಿಧಿಸಲಾಗಿದೆ. ಅವಧಿಗೆ ಮುನ್ನ ಪದವಿ ಡಿಪ್ಲೋಮಾ ಇನ್ನಿತರ ವೃತ್ತಿಪರ ಕೋರ್ಸಗಳನ್ನು ಮುಗಿಸಿ ಉದ್ಯೋಗಕ್ಕಾಗಿ ಹಗಲಿರುಳು ಶ್ರಮಿಸಿದ ಜಾತಕ ಪಕ್ಷಿಗಳಂತೆ ಕಾಯುತ್ತಿರುವ ಯುವಜನರು ನಿರುದ್ಯೋಗಗಳಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. 

ಕಾಂಗ್ರೆಸ್ ಪಕ್ಷವು ಚುನಾವಣೆಗೆ ಮುನ್ನ ಎಲ್ಲಾ ನಿರುದ್ಯೋಗ ಯುವಕರಿಗೆ ನಿರುದ್ಯೋಗ ಪೆನ್ಷನ್  ನೀಡುತ್ತಿವೆ ಎಂದು ನೀಡಿದ್ದ ಭರವಸೆ ನಂಬಿಕೊಂಡು ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಈಗಲಾದರೂ ಒಂದು ರಾಜಕೀಯ ಪಕ್ಷ ಅಧಿಕೃತವಾಗಿ ಒಪ್ಪಿಕೊಂಡಿದೆ ಎಂಬ ಆಶಾಬಾವನೆಯೊಂದಿಗೆ ರಾಜ್ಯದ ಬಹುತೇಕ ಯುವಜನರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಆದ್ದರಿಂದ ಷರತ್ತನ್ನು ಹಾಕದೆ ಎಲ್ಲಾ  ನಿರುದ್ಯೋಗಿಗಳಿಗೆ  ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಹಲವಾರು ಯುವತಿ, ಯುವಕರು ಪಾಲ್ಗೊಂಡಿದ್ದರು. 


ಸುದ್ದಿ ಓದಿ