ಫುಕೆಟ್–ದೆಹಲಿ ಏರ್ ಇಂಡಿಯಾ ವಿಮಾನಕ್ಕೆ ತೀವ್ರ ವಾಯುಕ್ಷೋಭೆ; 12 ಮಂದಿಗೆ ಗಾಯ
Air India Flight from Phuket to Delhi Hits Turbulence, 12 Injured
ನವದೆಹಲಿ, ಆ. 4: ಫುಕೆಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾದ ವಿಮಾನವು ಮಂಗಳವಾರ ಇಳಿಯುವ ವೇಳೆ ತೀವ್ರ ವಾಯುಕ್ಷೋಭೆಗೆ (ಟರ್ಬುಲೆನ್ಸ್) ಸಿಲುಕಿದ ಪರಿಣಾಮ 10 ಪ್ರಯಾಣಿಕರು ಹಾಗೂ ಇಬ್ಬರು ಕ್ಯಾಬಿನ್ ಸಿಬ್ಬಂದಿ ಸೇರಿ ಒಟ್ಟು 12 ಮಂದಿ ಗಾಯಗೊಂಡಿದ್ದಾರೆ.
ಏರ್ ಇಂಡಿಯಾದ ಎಐ2379 ವಿಮಾನವು ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಆರಂಭಿಸಿದ್ದ ವೇಳೆ ವಾಯುಕ್ಷೋಭೆ ಉಂಟಾಗಿ, ವಿಮಾನವು ಕ್ಷಣಿಕವಾಗಿ ಎತ್ತರ ಕಳೆದುಕೊಂಡಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ವಿಮಾನವು ಬೆಳಿಗ್ಗೆ 11.07ಕ್ಕೆ ಸುರಕ್ಷಿತವಾಗಿ ನವದೆಹಲಿಯಲ್ಲಿ ಭೂಸ್ಪರ್ಶ ಮಾಡಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ವಿಮಾನದಿಂದ ಇಳಿಸಲಾಯಿತು.
"ಸದ್ಯಕ್ಕೆ ಯಾವುದೇ ಗಂಭೀರ ಗಾಯಗಳ ವರದಿಯಾಗಿಲ್ಲ. ಸಣ್ಣಪುಟ್ಟ ಗಾಯಗೊಂಡಿರುವ ಕೆಲವು ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ಪರೀಕ್ಷೆ ಹಾಗೂ ಚಿಕಿತ್ಸೆಗೆ ವಿಮಾನ ನಿಲ್ದಾಣದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಏರ್ ಇಂಡಿಯಾದ ವಿಮಾನ ನಿಲ್ದಾಣ ತಂಡ ಮತ್ತು ವೈದ್ಯಕೀಯ ಸಿಬ್ಬಂದಿ ಅಗತ್ಯ ಆರೈಕೆ ಒದಗಿಸುತ್ತಿದ್ದಾರೆ," ಎಂದು ಏರ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.
ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ನೆರವು ನೀಡಲಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 