ಕೊಲಂಬಿಯಾದಲ್ಲಿ ವಿಮಾನ ದುರಂತ: ನಾಲ್ವರು ಸಾವು
ಬೊಗೋಟಾ, ಫೆ 13, ಕೊಲಂಬಿಯಾ ರಾಜಧಾನಿ ಬೊಗೋಟಾದ ಉತ್ತರ ಭಾಗದಲ್ಲಿ ಅವಳಿ ಎಂಜಿನ್ ವಿಮಾನ ಅಪಘಾತಕ್ಕೀಡಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ ತಿಳಿಸಿದೆ. ಬುಧವಾರ ವಿಮಾನ ಹೊರಟ ಕೆಲವೇ ನಿಮಿಷಗಳಲ್ಲಿ ಅಪಘಾತ ಸಂಭವಿಸಿದೆ ಎಂದು ಸಂಸ್ಥೆ ತಿಳಿಸಿದೆ. ಅಪಘಾತದ ಕಾರಣ ಕಂಡುಹಿಡಿಯಲು ತನಿಖಾ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ.
ಕೊಲಂಬಿಯಾದ ಪೊಪಯಾನ್ ನಲ್ಲಿ ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದರು. ಈ ವಿಮಾನವೂ ಸಹ ಪೊಪಯಾನ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ದುರಂತಕ್ಕೀಡಾಗಿತ್ತು. ಕಳೆದ ವರ್ಷದ ಮಾರ್ಚ್ ನಲ್ಲಿ ಇದೇ ಕೊಲಂಬಿಯಾದ ವಿಲ್ಲಾವಿಸೆನ್ಸಿಯೊದಲ್ಲಿ 30 ಆಸನದ ಡೊಗ್ಲಾಸ್-ಡಿಸಿ 3 ವಿಮಾನ ದುರಂತಕ್ಕೀಡಾಗಿ 12 ಮಂದಿ ಮೃತಪಟ್ಟಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 