ಬಾರಾಮತಿಯಲ್ಲಿ ಅಜಿತ್ ಪವಾರ್ ಗೆಲುವು..
ಮುಂಬೈ, ಅ 24: ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ಅಬ್ಬರದ ನಡುವೆಯೂ ಎನ್ ಸಿ ಪಿ ನಾಯಕ ಶರದ್ ಪವಾರ್ ಪಶ್ಚಿಮ ಮಹಾರಾಷ್ಟ್ರದಲ್ಲಿ ತಮ್ಮ ಮತ ಬ್ಯಾಂಕ್ ಅನ್ನು, ರಾಜಕೀಯ ನೆಲೆಯನ್ನು ಗಟ್ಟಿಯಾಗಿಯೇ ಉಳಿಸಿಕೊಂಡಿರುವುದು ಫಲಿತಾಂಶಗಳಿಂದ ಗೊತ್ತಾಗಿದೆ.
ಬಾರಾಮತಿಯಲ್ಲಿ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ವಿಜಯ ಸಾಧಿಸಿದ್ದಾರೆ. ಈ ನಡುವೆ ಮತ್ತೊಂದು ಬೆಳವಣಿಗೆಯಲ್ಲಿ ಅವರ ವಿರುದ್ಧ ಸ್ಪರ್ಧೆ ಮಾಡಿದ್ದ ಬಿ ಎಸ್ ಪಿ ಯ ಅಶೋಕ್ ಮಾನೆ ಅವರು ಅಜಿತ್ ಪವಾರ್ ಅವರ ಪರವಾಗಿ, ಅಜಿತ್ ಪರವಾಗಿ ಬೆಂಬಲ ನೀಡಿದರೂ ಪ್ರಚಾರಕ್ಕೆ ಹೋಗದೇ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಪಿಸಿ ಬಿ ಎಸ್ ಪಿ ಯ ಕೆಲವು ಕಾರ್ಯಕರ್ತರು ಅಭ್ಯರ್ಥಿ ಅಶೋಕ್ ಮಾನೆ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಅಶೋಕ್ ಮಾನೆ ಅವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ತಮಗೆ ಪಕ್ಷದ ಯಾವುದೇ ಕಾರ್ಯಕರ್ತರು ಪ್ರಚಾರ ಸಮಯದಲ್ಲಿ ಸಹಕಾರ ನೀಡದೇ ತಾತ್ಸರ ಮಾಡಿದ್ದಾರೆ. ಇದರಿಂದ ಮನನೊಂದು, ಬೇಸರಗೊಂಡು ತಾವು ಕಣದಿಂದ ಮತ್ತು ಪ್ರಚಾರದಿಂದ ಹಿಂದೆ ಸರಿದು ಎನ್ ಸಿ ಪಿ ಅಭ್ಯರ್ಥಿ ಅಜಿತ್ ಪವಾರ್ ಅವರಿಗೆ ಬೆಂಬಲ ನೀಡಿರುವುದಾಗಿ ಅಶೋಕ್ ಮಾನೆ ಆಪ್ತರ ಬಳಿ ಹೇಳಿಕೊಂಡಿದ್ದರು ಎನ್ನಲಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 