ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್.ಪ್ಯಾಟಿ
ಬೈಲಹೊಂಗಲ 24: ತಾಲೂಕಿನಾದ್ಯಂತ ಸೋಮವಾರದಿಂದ ನಡೆಯುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಸಕಲ ಸಿದ್ಧತೆ ಮಾಡಿಕೊಂಡಿದ್ದು ಎಲ್ಲವೂ ವ್ಯವಸ್ಥಿತವಾಗಿ ನಡೆಯಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್.ಪ್ಯಾಟಿ ತಿಳಿಸಿದ್ದಾರೆ.
ಬೈಲಹೊಂಗಲ ತಾಲೂಕಿನಲ್ಲಿ ಒಟ್ಟು 11 ಪರೀಕ್ಷಾ ಕೇಂದ್ರಗಳಿದ್ದು, ಇದರಲ್ಲಿ ನಗರದ ಪುರಸಭೆ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆ, ಕಿತ್ತೂರು ರಾಣಿ ಚನ್ನಮ್ಮ ಆಂಗ್ಲ ಮಾಧ್ಯಮ ಶಾಲೆ, ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆ, ಸರಕಾರಿ ಪದವಿಪೂರ್ವ ಕಾಲೇಜು, ಆಕ್ಸಪರ್ಢ ಆಂಗ್ಲ ಮಾಧ್ಯಮ ಶಾಲೆ ಬೈಲವಾಡ, ನೇಸರಗಿಯ ವಿದ್ಯಾಮಂದಿರ ಪ್ರೌಢಶಾಲೆ, ಸರಕಾರಿ ಪದವಿಪೂರ್ವ ಕಾಲೇಜು, ಸಂಪಗಾಂವ ಗ್ರಾಮದ ಆರ್ಇಎಸ್ ಪ್ರೌಢಶಾಲೆ, ಸರಕಾರಿ ಪದವಿಪೂರ್ವ ಕಾಲೇಜು, ಬೆಳವಡಿ ಗ್ರಾಮದ ವೀರರಾಣಿ ಬೆಳವಡಿ ಮಲ್ಲಮ್ಮ ಸ್ಮಾರಕ ಪ್ರೌಢಶಾಲೆ, ಎಂ.ಆರ್.ಪಾಟೀಲ ಸರಕಾರಿ ಪ್ರೌಢಶಾಲೆಯಲ್ಲಿ ಜರುಗಲಿವೆ.
ಸುಮಾರು 4098 ವಿದ್ಯಾರ್ಥಿ, ವಿದ್ಯಾರ್ಥಿನಿಯರು, 39 ಖಾಸಗಿ ನೇರ ಪರೀಕ್ಷೆ, 48 ಪುನರಾವರ್ತಿತ ಅಭ್ಯರ್ಥಿಗಳು, 8 ಪುನರಾವರ್ತಿತ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 11 ಮುಖ್ಯ ಅಧೀಕ್ಷಕರು, 9 ಉಪಮುಖ್ಯ ಅಧೀಕ್ಷಕರು, 11 ಪ್ರಶ್ನೆ ಪತ್ರಿಕೆ ಪಾಲಕರು, 11 ಸ್ಥಾನಿಕ ಜಾಗೃತ ದಳ, 11 ಮೋಬೈಲ ಸ್ವಾಧೀನ ಅಧಿಕಾರಿಗಳು, 5 ಮಾರ್ಗ ಅಧಿಕಾರಿಗಳು, 220 ಕೊಠಡಿ ಮೇಲ್ವಚಾರಕರು ಕಾರ್ಯ ನಿರ್ವಹಿಸಲಿದ್ದಾರೆ.
ಪರೀಕ್ಷಾ ಕೊಠಡಿಗಳ ಕುರಿತು ನಿಗಾ ವಹಿಸಲು ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ಧೇಶಕರ ಕಚೇರಿ, ತಾಲೂಕಾ ಮಟ್ಟದ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ದ ಸಿಸಿ ಕ್ಯಾಮರಾ ಕಣ್ಗಾವಲು ಅಳವಡಿಸಿ ನಕಲು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು ಅಲ್ಲದೇ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ ಅಂತರದಲ್ಲಿರುವ ಝರಾಕ್ಷ ಅಂಗಡಿ, ಮುಗ್ಗಟ್ಟುಗಳನ್ನು ಬಂದ ಮಾಡಲು ಸೂಚಿಸಿ 144 ಕಲಂ ಜಾರಿಗೆ ಮಾಡಲಾಗಿದೆ.
ಪ್ರಪ್ರಥಮ ಬಾರಿಗೆ ರಾಜ್ಯ ಸರಕಾರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವದು ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಕುರಿತು ಆತಂಕ ದೂರ ಮಾಡಿದೆ. ವಿದ್ಯಾರ್ಥಿಗಳು ಎದೆ ಗುಂದದೆ ಧೈರ್ಯದಿಂದ ಪರೀಕ್ಷೆ ಎದುರಿಸಿ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು.
ಮಾರ್ಚ 25 ರಿಂದ ಏ. 6 ರವರೆಗೆ ನಡೆಯಲಿರುವ 10 ನೇ ತರಗತಿ ಪರೀಕ್ಷ್ಷೆಗಳು ಅತ್ಯಂತ ವ್ಯವಸ್ಥಿತವಾಗಿ ನಡೆಸುತ್ತಿದ್ದು ವಿದ್ಯಾರ್ಥಿಗಳು ಆತ್ಮಸೈರ್ಯ ಮೂಡಿಸಿಕೊಂಡು ಜವಾಬ್ದಾರಿಯುತವಾಗಿ ಪರೀಕ್ಷೆಯನ್ನು ಎದುರಿಸಬೇಕು. ಯಾವುದೇ ನಕಲು ಚಟುವಟಿಕೆಗಳಿಗೆ ಅವಕಾಶವಿಲ್ಲ. ಒಂದು ವೇಳೆ ಅಂತಹ ಆಕ್ರಮ ನಡೆದಿದ್ದು ಕಂಡು ಬಂದಲ್ಲಿ ನಿರ್ಧಾಕ್ಷಿಣವಾಗಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವದು.
-ಎ.ಎನ್.ಪ್ಯಾಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು,
ಬೈಲಹೊಂಗಲ