ಸ್ವಾತಂತ್ರ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಮಹಮ್ಮದ್ ರಜುಬೇರ್ ಸೂಚನೆ
All preparations for Independence Day celebrations: Additional District Collector Muhammad Rajuber i
ಬಳ್ಳಾರಿ 01: ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ರಜುಬೇರ್ ಎನ್. ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಆಗಸ್ಟ್ 15ರ ಕಾರ್ಯಕ್ರಮಗಳ ವಿವರ
ಸ್ವಾತಂತ್ರ್ಯೋತ್ಸವ ದಿನದಂದು ಬೆಳಗ್ಗೆ 8 ಗಂಟೆಗೆ ಡಾ. ರಾಜ್‌ಕುಮಾರ್ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ನಡೆಯಲಿದೆ. ಬಳಿಕ ಬೆಳಗ್ಗೆ 8.15ಕ್ಕೆ ಹೆಚ್.ಆರ್. ಗವಿಯಪ್ಪ ವೃತ್ತದ ಬಳಿ ಇರುವ ಬೃಹತ್ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ಬೆಳಗ್ಗೆ 8.30ಕ್ಕೆ ಬಿಎಂಎಸ್ಆರಿ್ಸ ಬಳಿ ಇರುವ ಗಾಂಧೀಜಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಗುತ್ತದೆ. ನಂತರ ಬೆಳಗ್ಗೆ 8.45ಕ್ಕೆ ಬಿಎಂಎಸ್ಆರಿ್ಸ ಮೈದಾನದಲ್ಲಿ ಗೌರವ ವಂದನೆ ಸ್ವೀಕಾರ ಮತ್ತು ಪಥಸಂಚಲನ ವೀಕ್ಷಣೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಮುಖ್ಯ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 