ಪಲ್ಸ್ ಪೊಲಿಯೋ ಅಭಿಯಾನ 2026 ಕ್ಕೆ ಉ.ಕ. ಜಿಲ್ಲೆಯಲ್ಲಿ ಸಕಲ ಸಿದ್ಧತೆ
All preparations in U.K. district for Pulse Polio Campaign 2026
ಕಾರವಾರ 26: ಜೂ.28 ರಂದು ಭಾನುವಾರ ರಾಜ್ಯಾದ್ಯಂತ ಪಲ್ಸ ಪೊಲಿಯೋ ನಡೆಯಲಿದೆ. ಇದರ ಅಂಗವಾಗಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ್ ಪೊಲಿಯೋ ಲಸಿಕೆ ಹಾಕಲು ಜಿಲ್ಲೆಯ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯಲ್ಲಿ ಒಂದು ತಿಂಗಳ ಮಗುವಿನಿಂದ ಹಿಡಿದು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೊಲೀಯೋ ನಿರೋಧಕ ಪಲ್ಸ ಹನಿ ಹಾಕಿಸುವುದು ಅತ್ಯಂತ ಅವಶ್ಯಕ ಕಾರ್ಯ ವಾಗಿದ್ದು ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಒಂದು ತಿಂಗಳಿಂದ ಮಕ್ಕಳ ತಾಯಂದಿರಿಗೆ ಜಾಗೃತಿ ಮೂಡಿಸಿದೆ. ಜಿಲ್ಲೆಯಲ್ಲಿ ನಗರ ಪ್ರದೇಶಗಳಲ್ಲಿ 24,273 ಮಕ್ಕಳಿದ್ದಾರೆ. ಉ.ಕ.ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ 65115 ಮಕ್ಕಳಿದ್ದಾರೆ.
ಜಿಲ್ಲೆಯಲ್ಲಿನ ಒಟ್ಟು 89,388 ಮಕ್ಕಳನ್ನು ಪೊಲಿಯೋ ಲಸಿಕೆ ಹಾಕಲು ಗುರುತಿಸಲಾಗಿದೆ. ಪಲ್ಸ ಹನಿ ಹಾಕಲು, ಶೇ.100 ರಷ್ಟು ಪ್ರಗತಿ ಸಾಧಿಸಲು ಆರೋಗ್ಯ ಮತ್ತು ಕು.ಕ. ಇಲಾಖೆ ಸಜ್ಜಾಗಿದೆ. 873 ಪಲ್ಸ ಪೊಲಿಯೋ ಬೂತ್ : ಉತ್ತರ ಕನ್ನಡ ಜಿಲ್ಲೆಯ ಎಲ್ಲ ಇಲಾಖೆಗಳು ಈ ಕಾರ್ಯಕ್ಕೆ ಸಹಕಾರ ನೀಡುತ್ತಿವೆ. ಜಿಲ್ಲೆಯಲ್ಲಿ ಒಟ್ಟು 873 ಪಲ್ಸ ಪೊಲಿಯೋ ಬೂತ್ಗಳನ್ನು, 31 ಟ್ರಾನ್ಸಿಸ್ಟ ತಂಡ ಹಾಗೂ 9 ಮೊಬೈಲ್ ತಂಡಗಳನ್ನು ನಿರ್ಮಿಸಿದ್ದು ಒಟ್ಟು 3596 ಇಲಾಖೆ, ಇಲಾಖೇತರ ಮತ್ತು ಸ್ವಯಂ ಸೇವಾ ಸಂಸ್ಥೆಯ ಸದಸ್ಯರನ್ನು ನಿಯೋಜಿಸಲಾಗಿದೆ. ಅಭಿಯಾನದ ಮೇಲ್ವಿಚಾರಣೆಗಾಗಿ ಒಟ್ಟು 184 ಮೇಲ್ವಿಚಾರಕರನ್ನು ಹಾಗೂ ಎಲ್ಲ ತಾಲೂಕುಗಳಿಗೆ ಜಿಲ್ಲಾ ಮಟ್ಟದ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 