ಎಪಿಎಂಸಿ ನಿಯಮ ಉಲ್ಲಂಘನೆ ಆರೋಪ: ಬ್ಯಾಂಕ್ ಕಟ್ಟಡ ಪರೀಶೀಲನೆ
Allegation of APMC rule violation: Inspection of bank building
ತಾಳಿಕೋಟಿ 05: ವಿಜಯಪುರ ನಗರದ ಎಪಿಎಂಸಿ ಮುಖ್ಯ ಪ್ರಾಂಗಣದ ನಿವೇಶನ ಸಂಖ್ಯೆ 27ರಲ್ಲಿ ನಿರ್ಮಾಣಗೊಂಡಿರುವ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಬ್ಯಾಂಕ್ ಕಟ್ಟಡ ಹಾಗೂ ಅದರಲ್ಲಿನ ವಾಣಿಜ್ಯ ಮಳಿಗೆಗಳ ನಿರ್ಮಾಣದಲ್ಲಿ ಎಪಿಎಂಸಿ ಕಾಯ್ದೆ ಮತ್ತು ನಿಯಮಾವಳಿ ಉಲ್ಲಂಘನೆಯಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಎಪಿಎಂಸಿ ಬೆಳಗಾವಿ ವಿಭಾಗೀಯ ಹೆಚ್ಚುವರಿ ನಿರ್ದೇಶಕ ಡಾ. ಕೊಡಿಗೌಡ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಸಾಮಾಜಿಕ ಕಾರ್ಯಕರ್ತ ಗುರಲಿಂಗಪ್ಪ ಗುನ್ನಾಪೂರ ಸಲ್ಲಿಸಿದ ದೂರಿನಲ್ಲಿ, ರೈತರ ಹಿತಕ್ಕಾಗಿ ಮೀಸಲಿರಬೇಕಾದ ನಿವೇಶನವನ್ನು ಬ್ಯಾಂಕ್ಗೆ ನೀಡಿದ್ದು, ಕಟ್ಟಡದಲ್ಲಿ 11 ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆ ಮೂಲಕ ಆದಾಯ ಗಳಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಪರೀಶೀಲನೆ ಬಳಿಕ ಮಾತನಾಡಿದ ಡಾ. ಕೊಡಿಗೌಡ, ಪ್ರಾಥಮಿಕ ಪರೀಶೀಲನೆಯಲ್ಲಿ ನಿಯಮ ಉಲ್ಲಂಘನೆಯ ಲಕ್ಷಣಗಳು ಕಂಡುಬಂದಿದ್ದು, ಸಮಗ್ರ ವರದಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಲಾಗುವುದು. ಅಲ್ಲಿಂದ ಬರುವ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ವೇಳೆ ಎಪಿಎಂಸಿ ಕಾರ್ಯದರ್ಶಿ ಆರ್.ಎಸ್. ರಾಠೋಡ್, ಬ್ಯಾಂಕ್ ಅಧ್ಯಕ್ಷ ಕಾಶಿನಾಥ ಮುರಾಳ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 