ವೋಟ್ ಚೋರಿ ಆರೋಪ: ಅ.3ರಂದು ಕಾಂಗ್ರೆಸ್ ಪ್ರತಿಭಟನೆ
ಗದಗ, ಅ.1: ಎಸ್‌ಐಆರ್ (ವೋಟ್ ಚೋರಿ) ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅ.3ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಾಸಣ್ಣ ಕುರಡಗಿ ಅವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಎಚ್.ಕೆ. ಪಾಟೀಲ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಎಪಿಎಂಸಿ ಪದಾಧಿಕಾರಿಗಳು, ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ಅಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ.
ಇದರೊಂದಿಗೆ ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್ಸಿ/ಎಸ್ಟಿ ಘಟಕ, ಅಲ್ಪಸಂಖ್ಯಾತರ ಘಟಕ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ ಘಟಕ, ರಾಜೀವ್ ಗಾಂಧಿ ಪಂಚಾಯಿತಿ ಸಂಘಟನೆ, ಮಾಜಿ ಸೈನಿಕರ ಘಟಕ, ಮೀನುಗಾರರ ಘಟಕ, ಕಾರ್ಮಿಕರ ಘಟಕ, ಐಎನ್ಟಿಯುಸಿ, ಕಾನೂನು ಮತ್ತು ಮಾನವ ಹಕ್ಕುಗಳ ಘಟಕ, ಕಿಸಾನ್ ಹಾಗೂ ಕ್ಷೇತ್ರ ಮಜ್ದೂರ್ ಘಟಕ, ವೈದ್ಯರ ಘಟಕ, ವೃತ್ತಿಪರರ ಘಟಕ, ಪದವೀಧರ ಹಾಗೂ ಶಿಕ್ಷಕರ ಘಟಕ ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ನೀತಿ ಮತ್ತು ಸಂಶೋಧನಾ ತರಬೇತಿ ಘಟಕ, ವಿಕಲಚೇತನರ ಘಟಕ, ಲೀಗಲ್ ರೈಟ್ಸ್ ಘಟಕ, ಐಟಿ ಮತ್ತು ಡೇಟಾ ಘಟಕ, ಮಾಧ್ಯಮ ಹಾಗೂ ಸಂಪರ್ಕ ವಿಭಾಗಗಳ ಪದಾಧಿಕಾರಿಗಳು, ಪಕ್ಷದ ಅಭಿಮಾನಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಗದಗ-ಬೆಟಗೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಹಾಗೂ ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿಯವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.