ಜಮಖಂಡಿ

ಚುನಾವಣಾ ಆಯೋಗದ ದುರುಪಯೋಗ ಆರೋಪ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಜಮಖಂಡಿಯಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಚುನಾವಣಾ ಆಯೋಗದ ದುರುಪಯೋಗ ಆರೋಪ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಜಮಖಂಡಿಯಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ
Allegations of misuse of the Election Commission: Congress stages protest in Jamkhandi demanding the

ಲೋಕದರ್ಶನ ವರದಿ 


                   ಜಮಖಂಡಿ  15: ಕೇಂದ್ರ ಬಿಜೆಪಿ ಸರ್ಕಾರ ಚುನಾವಣಾ ಅಯೋಗವನ್ನು ದುರುಪಯೋಗಪಡಿಸಿಕೊಂಡು ಮತದಾರರ ಹಕ್ಕು ಕಸಿಯುವ ಯತ್ನ ನಡೆಸುತ್ತಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಒತ್ತಾಯಿಸಿದರು. 

              ತಾಲೂಕಿನ ಹುನ್ನೂರ ಗ್ರಾಮದಿಂದ ನಗರದ ಎ.ಜಿ. ದೇಸಾಯಿ ವೃತ್ತದವರೆಗೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನದ ಆಶಯಗಳು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪಾದಯಾತ್ರೆ ನಡೆಸಿ, ಮಾನವ ಸರಪಳಿ ನಿರ್ಮಿಸಿ ಕೆಲಕಾಲ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಬಳಿಕ ತಹಸೀಲ್ದಾರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು. 

                ಸಂವಿಧಾನ ರಕ್ಷಣೆ ಹಾಗೂ ಪ್ರಜಾ ಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷ ದೇಶಾದ್ಯಾಂತ ಪ್ರತಿಭಟನೆಗೆ ಮುಂದಾಗಿದೆ. ಕೇಂದ್ರ ಸರ್ಕಾರ ಚುನಾವಣಾ ಆಯೋಗ ದುರುಪಯೋಗ ಪಡಿಸಿಕೊಂಡು ಪ್ರಜಾಪ್ರಭುತ್ವ' ವ್ಯವಸ್ಥೆಗೆ ಧಕ್ಕೆ ತರುವಂತಹ ಕಾರ್ಯ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಸಿದೆ.

              ಫಾರಂ ನಂಬರ್ 6ನ್ನು ಜಾರಿಗೊಳಿಸಿ ನಿಜವಾದ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವ ಉಳಿಸುವುದು, ಸಂವಿಧಾನದ ಆಶಯ ರಕ್ಷಿಸುವುದು ಹಾಗೂ ಪ್ರತಿಯೊಬ್ಬ ಭಾರತೀಯ ಪ್ರಜೆಯ ಸಂವಿಧಾನಬದ್ಧ ಹಕ್ಕುಗಳನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆದ್ದರಿಂದ ಕಾಂಗ್ರೆಸ್ ದೇಶ ವ್ಯಾಪಿ ಹೋರಾಟ ನಡೆಸುತ್ತಿದೆ ಎಂದರು. 

             ಜಿಲ್ಲಾ ಅಧ್ಯಕ್ಷ ದಯಾನಂದ ಪಾಟೀಲ ಮಾತನಾಡಿ, ಕೇಂದ್ರ ಸರ್ಕಾರ ಮತದಾರರನ್ನು ಕೈ ಬಿಡುವ ಮೂಲಕ ದೇಶದ ನಿವಾಸಿಗಳಿಗೆ ಪೌರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. 

ಕಾಂಗ್ರೇಸ್ ಮುಖಂಡರಾದ ಶ್ರೀಶೈಲ ದಳವಾಯಿ, ಬಿ.ಎಸ್‌. ಸಿಂಧೂರ, ಮಹೇಶ ಕೋಳಿ, ಅರ್ಜುನ ದಳವಾಯಿ, , ಮುತ್ತಣ್ಣ ಮೇತ್ರಿ, ಮಹದೇವ ಪಾಟಿಲ, ಸಮೀರ ಕಂಗನೊಳ್ಳಿ. ರಾಜು ಮೇಲಿನಕೇರಿ ಸೇರಿಂದತೆ ಅನೇಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. 


ಸುದ್ದಿ ಓದಿ