ವಿಜಯಪುರ

ವಾಲ್ಮೀಕಿ ಜಯಂತಿ ಆಚರಣೆಗೆ ಅಡ್ಡಿಪಡಿಸಿ ಜಾತಿನಿಂದನೆ ಆರೋಪ: ದೇವರ ಹಿಪ್ಪರಗಿ ತಹಶೀಲ್ದಾರ್ ಅಮಾನತಿಗೆ ವಾಲ್ಮೀಕಿ ಸಮಾಜ ಆಗ್ರಹ

ವಾಲ್ಮೀಕಿ ಜಯಂತಿ ಆಚರಣೆಗೆ ಅಡ್ಡಿಪಡಿಸಿ ಜಾತಿನಿಂದನೆ ಆರೋಪ: ದೇವರ ಹಿಪ್ಪರಗಿ ತಹಶೀಲ್ದಾರ್ ಅಮಾನತಿಗೆ ವಾಲ್ಮೀಕಿ ಸಮಾಜ ಆಗ್ರಹ
Allegations of obstructing Valmiki Jayanti celebrations and using casteist slurs: Valmiki community

ಲೋಕದರ್ಶನ ವರದಿ 


ವಿಜಯಪುರ 27: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಾಟಾಚಾರಕ್ಕೆ ಮಾಡಿ ವಾಲ್ಮೀಕಿ ಜನಾಂಗದವರಿಗೆ ಜಾತಿನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ದೇವರ ಹಿಪ್ಪರಗಿ ತಹಶೀಲ್ದಾರರಾದ ನಿಂಗಣ್ಣ ಬಿರಾದಾರ ಅವರನ್ನು ಕೂಡಲೇ ಅಮಾನತ್ತು ಮಾಡುವಂತೆ ಆಗ್ರಹಿಸಿ ವಾಲ್ಮೀಕಿ ಸಮಾಜದ ಮುಖಂಡರು ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ದೇವರ ಹಿಪ್ಪರಗಿ ತಾಲೂಕಾ ಅಧ್ಯಕ್ಷರಾದ ಶರಣಗೌಡ ಪಾಟೀಲ ಮಾತನಾಡಿ, ದೇವರ ಹಿಪ್ಪರಗಿ ತಹಶೀಲ್ದಾರ ನಿಂಗಣ್ಣ ಬಿರಾದಾರ ಅವರು ವಾಲ್ಮೀಕಿ ಜಯಂತಿಯನ್ನು ಶಿಷ್ಟಾಚಾರ ಪ್ರಕಾರ ಮಾಡುವಂತೆ ಸಮಾಜದ ಮುಖಂಡರು ಮನವಿ ಮಾಡಿಕೊಂಡಾಗ ಅದಕ್ಕೆ ಸ್ಪಂದಿಸದೆ ತಹಶೀಲ್ದಾರ ಅವರು ವಾಲ್ಮೀಕಿ ಮುಖಂಡರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿನಿಂದನೆ ಮಾಡಿದ್ದು ಖಂಡನೀಯ. ಕೂಡಲೇ ಅವರನ್ನು ಸರ್ಕಾರ ಅಮಾನತ್ತು ಮಾಡಬೇಕೆಂದು ಆಗ್ರಹಿಸಿದರು. 


ಸುದ್ದಿ ಓದಿ