ನರೇಗಾ ಕೂಲಿ ಕಾರ್ಮಿಕರ ವೇತನದಲ್ಲಿ ಅವ್ಯವಹಾರ ಆರೋಪ : ಪಿಡಿಓ ವಿರುದ್ದ ಪ್ರತಿಭಟನೆ
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಲೋಕೊಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬರುವ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ವೇತನದಲ್ಲಿ ಅವ್ಯವಹಾರ ನಡೆದಿರೋ ಬಗ್ಗೆ ಗ್ರಾಮಸ್ಥರಿಂದ ಪಿಡಿಒ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಯಿತು.
ನರೇಗಾ ಕೂಲಿ ಕಾರ್ಮಿಕರ ಬೆಂಬಲಕ್ಕೆ ಕೋರಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಗಡಿನಾಡು ಹಿತರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಿದ್ದವು. ಈ ಸಂದರ್ಭದಲ್ಲಿ ನೂರಾರು ಜನರು ಭಾಗವಹಿಸಿದ್ದರು.