ಅಮಟೆ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
ಖಾನಾಪುರ, ನ. 27: ತಾಲೂಕಿನ ಅಮಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ಸದಸ್ಯರು ಲಕ್ಷ್ಮಣ ಕಸರ್ಲೆಕರ್ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗಾವಿಯಲ್ಲಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಭೇಟಿಯಾದ ನೂತನ ಸದಸ್ಯರು, ಆಯ್ಕೆಗೆ ನೀಡಿದ ಸಹಕಾರಕ್ಕಾಗಿ ಕೃತಜ್ಞತೆ ಸಲ್ಲಿಸಿದರು.
ನೂತನ ಸದಸ್ಯರನ್ನು ಅಭಿನಂದಿಸಿದ ಹಟ್ಟಿಹೊಳಿ ಅವರು, ಸಂಘದ ಅಭಿವೃದ್ಧಿ ಹಾಗೂ ರೈತರ ಹಿತಕ್ಕಾಗಿ ಶ್ರಮಿಸುವಂತೆ ಕರೆ ನೀಡಿದರು.