ಪಕ್ಷೇತರ ಅಭ್ಯರ್ಥಿಯಾಗಿ ಅಂಬಾದಾಸ ಕಾಮೂರ್ತಿ ನಾಮಪತ್ರ ಸಲ್ಲಿಕೆ
ರಬಕವಿ-ಬನಹಟ್ಟಿ : ತೇರದಾಳ ವಿಧಾನಸಭಾ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆಯನ್ನು ಉದ್ಯಮಿ ಅಂಬಾದಾಸ ಕಾಮೂರ್ತಿ ಚುನಾವಣಾಧಿಕಾರಿ ಡಾ. ಶಶಿಧರ ನಾಡಗೌಡ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ವಿವಿಧ ಸಮುದಾಯದ ಸ್ವಾಮಿಜಿ, ಮಠಾಧೀಶರು ಸೇರಿದಂತೆ ಎಲ್ಲ ಸಮುದಾಯಗಳ ಜನರನ್ನು ಒಗ್ಗೂಡಿಸಿ ಬೃಹತ್ ಸ್ವಾಭಿಮಾನಿ ಸಮಾವೇಶ ನಡೆಸಿದ ಉದ್ಯಮಿ ಕಾಮೂರ್ತಿ ಸ್ಪರ್ಧೆಯಿಂದ ಕ್ಷೇತ್ರ ಚುನಾವಣಾ ರಂಗೇರಿದೆ. ತೇರದಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸೋಮವಾರ ಒಂದು ನಾಮಪತ್ರ ಸಲ್ಲಿಕೆಯಾಗಿದ್ದು, ಇದುವರೆಗೆ ಒಟ್ಟು ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ.