ಅಂಬೇಡ್ಕರ್ ಚಿಂತನೆ ಯುವಜನತೆಗೆ ದಾರೀದೀಪ: ಕುಲಪತಿ
Ambedkar's thought is a beacon for youth: Chancellor
ಲೋಕದರ್ಶನ ವರದಿ
ಕಲಬುರಗಿ 5: ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಕರ್ನಾಟಕದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹೆಜ್ಜೆಗಳು’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಶಶಿಕಾಂತ್ ಎಸ್. ಗಡೇಕರ್ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಜ್ಞಾನ, ಚಿಂತನೆ ಮತ್ತು ಸಾಮಾಜಿಕ ಸೇವೆ ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಹೇಳಿದರು.
ವಿಶೇಷ ಉಪನ್ಯಾಸ ನೀಡಿದ ಬಿ.ಆರ್. ಬನಸೋಡೆ ಅವರು, ಅಂಬೇಡ್ಕರ್ ಅವರ ಕರ್ನಾಟಕದೊಂದಿಗೆ ಇರುವ ನಿಕಟ ಸಂಬಂಧ, ವಿಜಯಪುರ, ಧಾರವಾಡ ಸೇರಿದಂತೆ ವಿವಿಧ ಸ್ಥಳಗಳಿಗೆ ನೀಡಿದ ಭೇಟಿಗಳು ಹಾಗೂ ಅವರ ಸಾಮಾಜಿಕ ಹೋರಾಟಗಳ ಕುರಿತು ವಿವರಿಸಿದರು. ಅಂಬೇಡ್ಕರ್ ಅವರ ಚಿಂತನೆಗಳನ್ನು ಅಧ್ಯಯನ ಮಾಡುವ ಮೂಲಕ ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಅರಿತುಕೊಳ್ಳಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಜೀವನ, ಹೋರಾಟ ಮತ್ತು ಕರ್ನಾಟಕದ ಐತಿಹಾಸಿಕ ನಂಟಿನ ಕುರಿತು ಚರ್ಚೆ ನಡೆಯಿತು. ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಡಾ. ರೆಹಮಾನ್ ಪಟೇಲ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 