ಶಾಲಾ ಮಕ್ಕಳಿಗೆ ಅಂಬೇಡ್ಕರ್, ಗಾಂಧಿ ಚಲನಚಿತ್ರ ಪ್ರದರ್ಶನ
ಕೊಪ್ಪಳ 11: ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು ಇವರ ವತಿಯಿಂದ ನಗರದ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು (ಫೆ.11) ಆಯೋಜಿಸಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಗಾಂಧೀ ಸಿನಿಮಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು.
ಪ್ರಾಂಶುಪಾಲರಾದ ಗೌರಮ್ಮ ಹಕ್ಕಿ ಮಾತನಾಡಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಜೀ ಅವರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ದಿಮಂತರಲ್ಲಿ ಪ್ರಮುಖರಾಗಿದ್ದು, ಇವರ ಬಾಲ್ಯ ಜೀವನ ಮತ್ತು ಸಾಧನೆಗಳನ್ನು ಕುರಿತಾದ ಚಲನಚಿತ್ರಗಳನ್ನು ನೋಡುವುದರ ಮೂಲಕ ಅವರ ತತ್ವ ಮತ್ತು ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿಲಯದ ಮೇಲ್ವಿಚಾರಕರಾದ ಗುರುನಾಥ ಹಾಗೂ ಶಿಕ್ಷಕರಾದ ಮಂಜುಳಾ, ಭಾಗ್ಯಶ್ರೀ, ಶಕುಂತಲಾ, ಶೈಲಶ್ರೀ, ಪುಂಡಲೀಕ ಪೂಜಾರ, ಮಹೇಶ, ಚೆನ್ನಯ್ಯ ವಿ. ಹಿರೇಮಠ, ಲಿಂಗೇಶ ಬಿ, ಗವಿಸಿದ್ದಪ್ಪ ಸೇರಿದಂತೆ ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಹಾಜರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 